ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ನೂತನ ಜನಪ್ರತಿನಿಧಿಗಳಿಗೆ ಸನ್ಮಾನ

Published 26 ಆಗಸ್ಟ್ 2024, 15:54 IST
Last Updated 26 ಆಗಸ್ಟ್ 2024, 15:54 IST
ಅಕ್ಷರ ಗಾತ್ರ

ಬೀದರ್‌: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಗರದಲ್ಲಿ ಭಾನುವಾರ ನೂತನ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

ಸಂಸದ ಸಾಗರ್‌ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ ಅವರನ್ನು ಅಭಿನಂದಿಸಲಾಯಿತು.

ಸಂಸದ ಸಾಗರ್‌ ಖಂಡ್ರೆ ಮಾತನಾಡಿ,‘ಕ್ಷೇತ್ರದ ಜನತೆ ನನಗೆ ನೀಡಿದ ಗುರುತರ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ. ಶೀಘ್ರದಲ್ಲೇ ವಿಮಾನಯಾನ ಸೇವೆ ಆರಂಭಿಸಲು ಪ್ರಯತ್ನ ನಡೆಯುತ್ತಿದೆ’ ಎಂದು ತಿಳಿಸಿದರು.

ಚಿಂತಕ ಗೊ.ರು.ಚನ್ನಬಸಪ್ಪ ಮಾತನಾಡಿ,‘ನೂತನ ಜನಪ್ರತಿನಿಧಿಗಳು ಪಕ್ಷಾತೀತವಾಗಿ, ಜಾತ್ಯತೀತವಾಗಿ ಜನಸೇವೆ ಮಾಡಬೇಕು’ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ,‘ಜಿಲ್ಲೆಯ ಮಹಾಜನತೆ, ಜನಸೇವೆಗಾಗಿ ನಮ್ಮ ಪರಿವಾರದ ಕೈ ಹಿಡಿದಿದ್ದೀರಿ. ಕೊಟ್ಟ ಮಾತಿನಂತೆ ಜನರ ಆಶೋತ್ತರಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನನಗೆ ಅರಣ್ಯ ಖಾತೆ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯನ್ನು ಹಸಿರು ಮನೆಯ ತವರೂರಾಗಿ ಮಾಡೋಣ’ ಎಂದು ಹೇಳಿದರು.

ಸಮಿತಿ ಸಂಯೋಜಕ ಪ್ರೊ.ಜಗನ್ನಾಥ ಹೆಬ್ಬಾಳೆ ಮಾತನಾಡಿ,‘ಬೀದರ್–ಜಹೀರಾಬಾದ್‌ ಗಡಿಯಲ್ಲಿ ಸಾಂಸ್ಕೃತಿಕ ಹಬ್ ನಿರ್ಮಿಸಲು ಕೇಂದ್ರದಲ್ಲಿ ₹50 ಕೋಟಿ ಅನುದಾನವಿದೆ. ಅದಕ್ಕೆ ಸಂಸದರು ಶ್ರಮಿಸಬೇಕು’ ಎಂದರು.

ಪೌರಾಡಳಿತ ಸಚಿವ ರಹೀಂ ಖಾನ್, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು, ಗುರುನಾನಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಲಬೀರಸಿಂಗ್, ಜಹೀರಾಬಾದ್‌ ಸಂಸದ ಸುರೇಶಕುಮಾರ ಶೆಟಕಾರ, ಬೀದರ್‌ ವಿ.ವಿ. ಕುಲಪತಿ ಪ್ರೊ.ಬಿ.ಎಸ್.ಬಿರಾದಾರ, ನಗರಸಭೆ ಅಧ್ಯಕ್ಷ ಮೊಹಮ್ಮದ್‌ ಗೌಸ್, ಡಾ.ಗುರಮ್ಮ ಸಿದ್ದಾರೆಡ್ಡಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಅಶೋಕ ಹೆಬ್ಬಾಳೆ, ಬಿ.ಜಿ.ಶೆಟಕಾರ, ಶಿವಶರಣಪ್ಪ ವಾಲಿ, ದಿಗಂಬರ ಮಡಿವಾಳ, ಆನಂದ ದೇವಪ್ಪ, ಬಸವರಾಜ ಧನ್ನೂರ, ವೈಜಿನಾಥ ಕಮಠಾಣೆ, ರಾಜಕುಮಾರ ಹೆಬ್ಬಾಳೆ, ಶಾಂತಕುಮಾರ ಪಾಟೀಲ, ಶಿವಶರಣಪ್ಪ ಗಣೇಶಪುರ, ಸಮಿತಿಯ ಕಾರ್ಯದರ್ಶಿ ಅಬ್ದುಲ್ ಖದೀರ್‌, ಮಹಾರುದ್ರ ಡಾಕುಳಗೆ, ರೇಣುಕಾ ಮಳ್ಳಿ ಹಾಗೂ ವೈಜಿನಾಥ ಪಾಟೀಲ ಹಾಜರಿದ್ದರು. ಶಿವಕುಮಾರ ಪಾಂಚಾಳ ನಾಡಗೀತೆ ಹಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT