ಬೀದರ್: ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ಐದು ದಿನಗಳ 2026ನೇ ಸಾಲಿನ ಯುಜಿ ಸಿಇಟಿ ಸೀಟು ಹಂಚಿಕೆ ಮಂಥನ ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮೊದಲ ಹಾಗೂ ಎರಡನೇ ದಿನ ಜಿಲ್ಲೆಯ ಅನೇಕ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ಕೊಟ್ಟು ಆನ್ಲೈನ್ ಸೀಟು ಹಂಚಿಕೆ ವಿಧಾನ ಅರಿತುಕೊಂಡರು.

ಪ್ರಾಚಾರ್ಯ ದೇವೇಂದ್ರ ಹಂಚೆ ಮಾತನಾಡಿ, ಯುಜಿ ಸಿಇಟಿ ಸೀಟ್ ಆಯ್ಕೆ ಕುರಿತು ಬಹಳಷ್ಟು ವಿದ್ಯಾರ್ಥಿಗಳಲ್ಲಿ ಗೊಂದಲ ಇದೆ. ಅದನ್ನು ನಿವಾರಿಸಿ, ಸೀಟ್ ಹಂಚಿಕೆಯ ಸಮಗ್ರ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದಲ್ಲಿ ಸೀಟ್ ಹಂಚಿಕೆ ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೋರ್ಸ್ಗಳ ಆನ್ಲೈನ್ ಸೀಟು ಹಂಚಿಕೆ ಹಂತಗಳು, ಆಯ್ಕೆ ವಿಧಾನಗಳ ಕುರಿತು ಉಚಿತ ಮಾಹಿತಿ ಒದಗಿಸಲಾಗುತ್ತಿದೆ. ಮೇ30ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.

ಬೀದರ್ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ ಇನ್ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್, ಬಿ.ಇ ಇನ್ ಆರ್ಟಿಫಿಷಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್, ಬಿ.ಇ ಇನ್ ಸಿವಿಲ್ ಎಂಜಿನಿಯರಿಂಗ್ ಹಾಗೂ ಬಿ.ಇ. ಇನ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಸೇರಿ ನಾಲ್ಕು ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶ ಇದೆ. ಸಿಇಟಿ ಕೋಡ್ ಇ292 ಬಳಸಿ ವಿದ್ಯಾರ್ಥಿಗಳು ಕಾಲೇಜನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-742896153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.