ಬೀದರ್: ‘ಬೀದರ್ ವಿಶ್ವವಿದ್ಯಾಲಯದ ಮೊದಲ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಅಥ್ಲೆಟಿಕ್ಸ್ ಕ್ರೀಡಾಕೂಟ ಡಿ.17, 18ರಂದು ತಾಲ್ಲೂಕಿನ ಕಮಠಾಣ ಸಮೀಪದ ನಂದಿನಗರದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿದೆ’ ಎಂದು ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ತಿಳಿಸಿದರು.

ಡಿ. 17ರಂದು ಬೆಳಿಗ್ಗೆ 10.30ಕ್ಕೆ ದೈಹಿಕ ಶಿಕ್ಷಣ ನಿರ್ದೇಶಕಿ ಮಹೇಶ್ವರಿ ಉಡಗಟ್ಟಿ ಕ್ರೀಡಾಕೂಟ ಉದ್ಘಾಟಿಸುವರು. ಪಶು ವಿವಿ ಕುಲಪತಿ ಕೆ.ಸಿ.ವೀರಣ್ಣ ಹಾಗೂ ಬೀದರ್ ವಿವಿ ಸಿಂಡಿಕೇಟ್ ಸದಸ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು. ಡಿ. 18ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಕ್ರೀಡಾಕೂಟದ ಸಂಬಂಧ ಈಗಾಗಲೇ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. 300ಕ್ಕೂ ಅಧಿಕ ವಿದ್ಯಾರ್ಥಿಗಳು ಈಗಾಗಲೇ ಹೆಸರು ನೋಂದಣಿ ಮಾಡಿಸಿದ್ದಾರೆ. ಎತ್ತರ ಜಿಗಿತ, ಉದ್ದ ಜಿಗಿತ, ಓಟದ ಸ್ಪರ್ಧೆ, ಗುಂಡು ಎಸೆಯುವ ಸ್ಪರ್ಧೆ ಸೇರಿದಂತೆ ಇತರೆ ಕ್ರೀಡೆಗಳು ನಡೆಯಲಿವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಈ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ವಿವಿಯ ಹಲವು ವಿದ್ಯಾರ್ಥಿಗಳು ಅಂತರ ವಿವಿ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ವಿವಿಯಲ್ಲಿ ಸುಸಜ್ಜಿತ ಕಟ್ಟಡ, ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಮಂಜೂರಾದ ನಂತರ ಸೌಕರ್ಯ ಕಲ್ಪಿಸಲಾಗುವುದು. ಕೆಕೆಆರ್ಡಿಬಿಯಿಂದ ₹20 ಕೋಟಿ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಕೂಡ ಆಶ್ವಾಸನೆ ನೀಡಿದ್ದಾರೆ. ಸದ್ಯ ವಿವಿ ಆಂತರಿಕ ಸಂಪನ್ಮೂಲದಿಂದಲೇ ನಡೆಯುತ್ತಿದೆ ಎಂದು ಹೇಳಿದರು.

ವಿವಿ ಕುಲಸಚಿವ ಪ್ರೊ.ಪರಮೇಶ್ವರ ನಾಯಕ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎನ್.ಎಸ್.ಕುಲಕರ್ಣಿ, ಓಂಕಾರ ಮಾಶೆಟ್ಟಿ ಹಾಗೂ ರವಿ ಖೂಬಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.