ಬೀದರ್: ತಾಲ್ಲೂಕಿನ ವಾಲದೊಡ್ಡಿ (ಓಡವಾಡ) ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ, ಸರ್ಕಾರಿ ಜಮೀನು ಹಾಗೂ ದಲಿತರಿಗೆ ನೀಡಲಾದ ಸಿ-ಫಾರಂ ಜಮೀನು ಅತಿಕ್ರಮಿಸಿ ಅಕ್ರಮ ಲೇಔಟ್ ನಿರ್ಮಿಸಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಾಲದೊಡ್ಡಿ ಗ್ರಾಮದ ಸರ್ವೇ ನಂಬರ್ 74ರ ಸಾರ್ವಜನಿಕ ಸ್ಮಶಾನ ಭೂಮಿ, ಸರ್ವೇ ನಂಬರ್ 75ರ ಸರ್ಕಾರಿ ಜಮೀನು, ಸರ್ವೇ ನಂಬರ್ 81, 82, 83ರ ಸಿ-ಫಾರಂ ಭೂಮಿ ಹಾಗೂ ಸರ್ವೇ ನಂಬರ್ 86, 87ರ ಜಮೀನು ಕಬಳಿಸಿ, ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಿಸಲಾಗಿದೆ ಎಂದು ಆರೋಪಿಸಿದರು.

ಸುಮೇದ ಬೌದ್ಧ ವಿಹಾರಕ್ಕೆ ಸಂಬಂಧಿಸಿದ ಜಮೀನಿನಲ್ಲಿಯೂ ಅಕ್ರಮ ಪ್ರವೇಶ ನಡೆದಿದೆ. ಈ ಕುರಿತು ಪ್ರಶ್ನಿಸಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಮಹಿಳೆಯರ ಮೇಲೂ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದರು.

ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ, ಮಾರ್ಕೆಟ್ ಪೊಲೀಸ್ ಠಾಣೆ ಹಾಗೂ ಸೈಬರ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಮದ ಗಣಪತಿ ಶಂಕರ, ನಾಮದೇವ ಪಂಢರಿ, ಪ್ರವೀಣಕುಮಾರ ಯೋಗಿನಾಥ, ಗ್ರಾಮ ಪಂಚಾಯಿತಿ ಸದಸ್ಯ ಕಾಶಿನಾಥ ಶಿವರಾಜ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-33-1890066906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.