ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಇಲ್ಲಿನ ಕಮಠಾಣ ರಸ್ತೆಯ ನಂದಿನಗರದ ಆವರಣದಲ್ಲಿ ಮಂಗಳವಾರ ನಡೆಯಿತು.

2022–23ನೇ ಸಾಲಿನ ‘ಬ್ಯಾಚುಲರ್ ಆಫ್ ವೆಟರ್ನರಿ ಸೈನ್ಸ್ ಅಂಡ್ ಅನಿಮಲ್ ಹಸ್ಬೆಂಡ್ರಿ’ (ಬಿವಿಎಸ್ಸಿ ಅಂಡ್ ಎಎಚ್) ಸ್ನಾತಕ ಪದವಿಯಲ್ಲಿ ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ಜೆ.ಪಿ. ನಗರದ ನಿವಾಸಿ ಆದಿತ್ಯ ಚಿದಾನಂದ ಈಶ್ವರಲ ಅವರು 9 ಚಿನ್ನದ ಪದಕಗಳಿಗೆ ಭಾಜನರಾದರು. ಆದಿತ್ಯ ಅವರ ಸಹಪಾಠಿ ರವೀನಾ ಅವರು 15 ಚಿನ್ನದ ಪದಕಗಳ ಸಾಧನೆ ಮಾಡಿದರು. ಚಿತ್ರದುರ್ಗದ ರವೀನಾ ಅವರು ಗೈರು ಹಾಜರಾಗಿದ್ದರು.

ಚಿತ್ರದುರ್ಗದ ಚಳ್ಳಕೆರೆಯ ಚಿಕ್ಕೇನಹಳ್ಳಿ ಗ್ರಾಮದವರಾದ ದಕ್ಷೀತ್ ಪಿ.ಎಲ್. ಅವರು ಎಂವಿಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಆರು ಚಿನ್ನದ ಪದಕಗಳನ್ನು ಗಳಿಸಿದರು. ಇವರು ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 2022–23ನೇ ಸಾಲಿನಲ್ಲಿ ಈ ಸಾಧನೆ ಮಾಡಿದರು.

ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸ್ನಾತಕ ಪದವಿಯಲ್ಲಿ 16 ವಿದ್ಯಾರ್ಥಿಗಳಿಗೆ 53 ಚಿನ್ನದ ಪದಕಗಳು, ಸ್ನಾತಕೋತ್ತರ ಪದವಿಯಲ್ಲಿ 21 ವಿದ್ಯಾರ್ಥಿಗಳಿಗೆ 34 ಚಿನ್ನದ ಪದಕಗಳು, ಡಾಕ್ಟರೇಟ್ ಪದವಿ ಪೂರೈಸಿದ ಏಳು ವಿದ್ಯಾರ್ಥಿಗಳಿಗೆ ತಲಾ ಒಂದು ಚಿನ್ನದ ಪದಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 96 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.

ಒಟ್ಟು 634 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 419 ಸ್ನಾತಕ ಪದವೀಧರರು, 187 ಸ್ನಾತಕೋತ್ತರ ಹಾಗೂ 28 ಡಾಕ್ಟರೇಟ್ ಪದವೀಧರರು ಸೇರಿದ್ದಾರೆ. ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ನಿರ್ದೇಶಕ ಡಾ. ನವೀನಕುಮಾರ ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಪ್ರೊ. ಕೆ.ಸಿ. ವೀರಣ್ಣ, ಕುಲಸಚಿವ ಪಿ.ಟಿ. ರಮೇಶ, ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.