ಬೀದರ್: ಬೀದರ್ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ 164ನೇ ಜನ್ಮ ದಿನ ಆಚರಿಸಲಾಯಿತು.

ಒಕ್ಕೂಟದ ಗುರುನಾಥ ಜ್ಯಾಂತಿಕರ್ ಮಾತನಾಡಿ, ಸ್ವಾಮಿ ವಿವೇಕಾನಂದರು ಅಪ್ಪಟ ದೇಶಭಕ್ತ ಹಾಗೂ ಮೇಧಾವಿಯಾಗಿದ್ದರು. ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

ರಾಮಕೃಷ್ಣ ಪರಮಹಂಸರ ಶಿಷ್ಯರಾಗಿದ್ದ ಸ್ವಾಮಿ ವಿವೇಕಾನಂದರು, 1893ರ ಸೆಪ್ಟೆಂಬರ್ 11ರಂದು ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ನೀಡಿದ ಭಾಷಣದಿಂದ ಭಾರತದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಪರಿಚಯಿಸಿದರು. ಪ್ರತಿಯೊಬ್ಬ ಯುವಕನಿಗೂ ವಿವೇಕಾನಂದರ ಆದರ್ಶ ಜೀವನ ಮಾದರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಮುಖಂಡ ರಾಜಶೇಖರ್ ನಾಗಮೂರ್ತಿ ಮಾತನಾಡಿ, ಸ್ವಾಮಿ ವಿವೇಕಾನಂದರು ವೇದ-ಉಪನಿಷತ್ತುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ವಿವಿಧ ಪಂಥಗಳನ್ನು ಒಗ್ಗೂಡಿಸಿದ ಮಹಾನ್ ಚಿಂತಕರಾಗಿದ್ದರು. ಹಸಿದವರಿಗೆ ಊಟ ನೀಡಿ, ಬಡವರಲ್ಲಿ ದೇವರನ್ನು ಕಾಣಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದು ತಿಳಿಸಿದರು.

ಮುಖಂಡ ಜಗನ್ನಾಥ ಕರಂಜೆ, ಕಲ್ಯಾಣ ಪತ್ತಿನ ಸೌಹಾರ್ದ ಸಹಕಾರಿ ನಿರ್ದೇಶಕ ಚಂದ್ರಪ್ಪ ಬಿರಾದಾರ, ಒಕ್ಕೂಟದ ನಿರ್ದೇಶಕರಾದ ಶ್ರೀಕಾಂತ ಸ್ವಾಮಿ, ಸಂಜಯ ಕ್ಯಾಸಾ, ಸಂಜೀವಕುಮಾರ್ ಸಜ್ಜನ್, ನಾಗಶೆಟ್ಟಿ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ಹಾಗೂ ಸ್ಥಳೀಯ ಸಹಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.