ಬೀದರ್: ‘ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ-2026 ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು. ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ, ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29ರವರೆಗೆ ಸಿದ್ಧತೆ ಮತ್ತು ತರಬೇತಿ ಕಾರ್ಯಕ್ರಮ, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ, ಅಕ್ಟೋಬರ್ 3ರವರೆಗೆ ಅವುಗಳ ವಿಲೇವಾರಿ ಹಾಗೂ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು’ ಎಂದು ಹೇಳಿದರು.

‘ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ಹೊಸದಾಗಿ ಮತದಾನಕ್ಕೆ ಅರ್ಹರಾಗಿರುವವರ ಹೆಸರು ಸೇರ್ಪಡೆ, ಸ್ಥಳಾಂತರಗೊಂಡ ಮತದಾರರ ವಿವರಗಳ ನವೀಕರಣ, ಮೃತರ ಹೆಸರುಗಳ ತೆರವು ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಬಿಎಲ್ಒಗಳಿಗೆ ಸಹಕಾರ ನೀಡಬೇಕು’ ಎಂದರು.

‘ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳಲ್ಲಿ ಯಾವುದೇ ದೋಷಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಎಲ್ಲ ಮತದಾರರು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಬಿಎಲ್ಒಗಳಿಗೆ ಅಗತ್ಯ ಸಹಕಾರ ನೀಡುವ ಮೂಲಕ ಮತದಾರರ ಪಟ್ಟಿಯನ್ನು ಸಂಪೂರ್ಣ, ನಿಖರ ಮತ್ತು ಪಾರದರ್ಶಕಗೊಳಿಸಲು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-633298910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.