ಬೀದರ್: ನಗರದ ಮೈಲೂರಿನ ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಜಿಎನ್ಡಿಇಸಿ) ಭಾನುವಾರ ಬೆಳಿಗ್ಗೆ ಏರ್ಪಡಿಸಿದ್ದ ಯೋಗ ಮಹೋತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಏಕಕಾಲಕ್ಕೆ 5,326 ಜನ ಯೋಗ ಮಾಡಿದರು. ಒಟ್ಟಿಗೆ ಒಂದು ನಿಮಿಷ ತಾಡಾಸನ ಭಂಗಿಯಲ್ಲಿ ನಿಲ್ಲುವುದರ ಮೂಲಕ ‘ಏಷ್ಯಾ ಬುಕ್ ಆಫ್ ರೆಕಾರ್ಡ್’ ದಾಖಲೆ ಬರೆದಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ಇಂಟರ್ನ್ಯಾಷನಲ್ ನ್ಯಾಚುರೋಪಥಿ ಆರ್ಗನೈಜೇಶನ್, ಸೂರ್ಯ ಫೌಂಡೇಶನ್ ನೇತೃತ್ವದಲ್ಲಿ ಗುರುನಾನಕ್ ಗ್ರುಪ್ ಆಫ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆಗೆ ನೂರು ದಿನಗಳಿರುವಾಗ ಯೋಗ ಮಹೋತ್ಸವ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡಾ, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸಹಕಾರಿಯಾದುದು. ಪ್ರತಿಯೊಬ್ಬರೂ ಯೋಗವನ್ನು ದೈನಂದಿನ ಜೀವನದ ಭಾಗವನ್ನಾಗಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ ಇಲಾಖೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಈ ತರಹದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸ್ವಾಗತಾರ್ಹ ಎಂದರು.

ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ ಮಾತನಾಡಿ, ರೋಗ ಮುಕ್ತ, ಸ್ವಸ್ಥ-ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಯೋಗ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ವಿಶ್ವದ ಅನೇಕ ರಾಷ್ಟ್ರಗಳು ಈಗ ಯೋಗದ ಮೊರೆ ಹೋಗಿವೆ. ವಿದೇಶಗಳಿಂದ ಸಾಕಷ್ಟು ಅಳವಡಿಸಿಕೊಂಡಿದ್ದೇವೆ. ಆದರೆ, ಭಾರತ ದೇಶವು ಯೋಗ ಜಗತ್ತಿಗೆ ನೀಡಿದೆ. ಇದು ಬಹುದೊಡ್ಡ ಕೊಡುಗೆ. ಎಲ್ಲರೂ ಕಾಯಕದ ಜೊತೆಗೆ ಯೋಗ ಅಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಗುರುನಾನಕ್ ಗ್ರುಪ್ ಆಫ್ ಇನ್ಸ್ಟಿಟ್ಯೂಟ್ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಯೋಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ನಮಲ್ಲಿ ಕಾಣಿಸಿಕೊಳ್ಳುವ ಅನೇಕ ರೋಗಗಳಿಗೆ ಪರಿಹಾರವನ್ನೂ ಯೋಗ ಹಾಗೂ ಪ್ರಾಕೃತಿಕ ಚಿಕಿತ್ಸೆಯಿಂದ ಕಂಡುಕೊಳ್ಳಬಹುದು. ಆಧುನಿಕ ಒತ್ತಡದ ಬದುಕಿನಲ್ಲಿ ಬಹುತೇಕರಿಗೆ ಜೀವನವೇ ಸಾಕು ಎಂಬ ಭಾವ ಮೂಡುತ್ತಿದೆ. ಆದರೆ, ಯೋಗ ಹಾಗೂ ಪ್ರಾಕೃತಿಕ ಚಿಕಿತ್ಸೆಯು ಈ ಎಲ್ಲ ಒತ್ತಡಗಳನ್ನು ತಡೆದು ಮನಸ್ಸು ಪ್ರಶಾಂತಗೊಳಿಸುತ್ತದೆ ಎಂದರು.

ಪತಂಜಲಿ ಯೋಗ ಸಮಿತಿ ಕರ್ನಾಟಕ ಪ್ರಭಾರಿ ಭವರಲಾಲ್ ಆರ್ಯ ಯೋಗ ಹೇಳಿಕೊಟ್ಟರು. ಶ್ರೀ ಸಿದ್ದರಾಮೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಯೋಗಪಟು ಆನಂದ ಅವರ ಯೋಗ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಆಯುಷ್ ಇಲಾಖೆಯ ಸಚಿವ ಪ್ರತಾಪರಾವ್ ಜಾಧವ ವಿಡಿಯೊ ಸಂದೇಶ ಪ್ರಸಾರ ಮಾಡಲಾಯಿತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿಮಾ ಬೆಹೆನಜಿ, ಗುರುನಾನಕ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್, ನಿರ್ದೇಶಕ ಸರ್ದಾರ್ ಪವಿತ್ ಸಿಂಗ್, ಬಿಜಿಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಬಾಬುರಾವ ಕಾರಬಾರಿ, ಗುರುನಾಥ ಜ್ಯಾಂತಿಕರ್, ರಾಜಶೇಖರ ನಾಗಮೂರ್ತಿ, ಐ.ಎನ್.ಒ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸ್ವಾಮಿ, ರಾಜ್ಯ ಸಂಚಾಲಕ ಗುರುನಾಥ ರಾಜಗೀರಾ, ರಾಜ್ಯ ಕಾರ್ಯದರ್ಶಿ ಯೋಗೇಂದ್ರ ಯದಲಾಪುರೆ, ರಾಜ್ಯ ಕೋಶಾಧ್ಯಕ್ಷ ಮನ್ಮಥಯ್ಯ ಸ್ವಾಮಿ, ಜಿಲ್ಲಾಧ್ಯಕ್ಷ ಗೋರಖನಾಥ ಕುಂಬಾರ, ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ, ಸಂಚಾಲಕಿ ಮಂಜುಳಾ ಮುಚಳಂಬೆ, ಉಪಾಧ್ಯಕ್ಷೆ ರೂಪಾ ಪಾಟೀಲ, ಉಮಾದೇವಿ ರೂಗನ್, ಡಾ.ರೂಪೇಶ ಎಕಲಾರಕರ್, ಪೂರ್ಣಿಮಾ ಜಿ., ಡಾ.ಹಾವಗಿರಾವ ಮೈಲಾರೆ, ವಿವೇಕ ಜಲಾದೆ, ಡಾ.ಸುರೇಖಾ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-33-1634685381

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.