ಬೀದರ್: ಆರೋಗ್ಯ ಜಾಗೃತಿ ಮತ್ತು ಯೋಗಾಭ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ ಏ.18ರಂದು ವಿಶೇಷ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಸಮಿತಿ ತಿಳಿಸಿದೆ.

ನಗರದ ಸಪ್ನಾ ಕಲ್ಯಾಣ ಮಂಟಪದಲ್ಲಿ ಪತಂಜಲಿ ಯೋಗ ಪೀಠ ಕರ್ನಾಟಕದ ಮಾರ್ಗದರ್ಶನದಲ್ಲಿ ಶಿಬಿರವು ಬೆಳಿಗ್ಗೆ 5.30ಕ್ಕೆ ಆರಂಭವಾಗಲಿದೆ. ಪತಂಜಲಿಯ ಭಂವರಲಾಲ್ ಆರ್ಯ ಶಿಬಿರದಲ್ಲಿ ಭಾಗವಹಿಸಿ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನ ವಿಧಾನಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಡಲಿದ್ದಾರೆ. ದೈನಂದಿನ ಜೀವನದಲ್ಲಿ ಯೋಗದ ಮಹತ್ವ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಧಾನಗಳ ಕುರಿತು ಅವರು ಮಾರ್ಗದರ್ಶನ ನೀಡಲಿದ್ದಾರೆ. ಯೋಗ ಶಿಕ್ಷಕರು, ಯೋಗಾಭಿಮಾನಿಗಳು, ಹಿರಿಯರು, ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಯೋಗೇಂದ್ರ ತಿಳಿಸಿದ್ದಾರೆ. ಮಾಹಿತಿಗೆ 7019071385 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-33-840102805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.