ಬೀದರ್: ಯುವಕರು ದುಶ್ಚಟಗಳ ದಾಸರಾಗದೇ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ. ರೆಹಮಾನ್ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ್, ಜಿಲ್ಲಾ ವಕೀಲರ ಸಂಘ, ಅಬಕಾರಿ ಇಲಾಖೆ, ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರ ವಡ್ಡರ ಕಾಲೊನಿಯಲ್ಲಿ ಶನಿವಾರ ಏರ್ಪಡಿಸಿದ್ದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ, ಕಾನೂನು ಅರಿವು ಕಾರ್ಯಾಗಾರ ಹಾಗೂ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

‘ಮದ್ಯಪಾನ, ಮಾದಕ ವಸ್ತುಗಳ ಸೇವನೆ ಆರೋಗ್ಯ ಹಾಗೂ ಸಮಾಜಕ್ಕೆ ಒಳ್ಳೆಯದಲ್ಲ. ಸ್ವಸ್ಥ ಸಮಾಜ ನಿರ್ಮಿಸಬೇಕಾದರೆ ಇಂಥ ದುಶ್ಚಟಗಳಿಂದ ದೂರ ಇರಬೇಕು’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಅರ್ಜುನ್ ಬನಸೋಡೆ, ಅಬಕಾರಿ ಉಪ ಆಯುಕ್ತ ರವಿಶಂಕರ್ ಎ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಖಯ್ಯಾ ಬಿ. ಸ್ವಾಮಿ, ವಕೀಲ ಜಗನ್ನಾಥ ಸೊರಳ್ಳಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಕಿರಣ ಪಾಟೀಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-33-1869799440

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.