ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಜತೆ ಉದ್ಯೋಗ ಖಾತರಿ ಕೆಲಸ ಮಾಡಿದ ಸಿಇಒ

Last Updated 1 ಮೇ 2020, 14:22 IST
ಅಕ್ಷರ ಗಾತ್ರ

ಔರಾದ್ (ಬೀದರ್‌ ಜಿಲ್ಲೆ): ಜಿಲ್ಲಾ ಪಂಚಾಯಿತಿ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರು ಕಾರ್ಮಿಕರ ಜತೆಗೂಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಹೊತ್ತು ಕೆಲಸ ಮಾಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು.

ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ‘ನರೇಗಾ’ದಡಿ 150 ಕಾರ್ಮಿಕರು ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾರ್ಮಿಕ ದಿನ ನಿಮಿತ್ತ ಕಾರ್ಮಿಕರನ್ನು ಭೇಟಿ ಮಾಡಲು ಬಂದಿದ್ದ ಸಿಇಒ, ಕೈಯಲ್ಲಿ ಸಲಿಕೆ ಹಿಡಿದು ಮಣ್ಣು ತೆಗೆದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬೀರೇಂದ್ರಸಿಂಗ್, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಾನಂದ ಔರಾದೆ ಅವರೂ ಸಿಇಒ ಜತೆಗೆ ಕೈಜೋಡಿಸಿ ಕೆಲ ಹೊತ್ತು ಕೆಲಸ ಮಾಡಿದರು.

ನಂತರ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದ ಸಿಇಒ, 'ಎಷ್ಟು ದಿನದಿಂದ ಕೆಲಸ ಮಾಡುತ್ತಿದ್ದೀರಿ. ಕೂಲಿ ಸಿಕ್ಕಿದೆಯಾ' ಎಂದೂ ಮಾಹಿತಿ ಪಡೆದುಕೊಂಡರು.

'ಕಾರ್ಮಿಕರು ನಮ್ಮ ಹೆಮ್ಮೆ. ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು' ಎಂದು ಅವರ ಕೆಲಸವನ್ನು ಶ್ಲಾಘಿಸಿದರು. ನಂತರ ಕೇಕ್ ಕತ್ತರಿಸಿ ಅವರ ಜತೆ ಸಂತಸ ಹಂಚಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT