ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಮೂರು ದಿನ ‘ಬಿದರಿ ಉತ್ಸವ’

Last Updated 11 ಆಗಸ್ಟ್ 2022, 13:13 IST
ಅಕ್ಷರ ಗಾತ್ರ

ಬೀದರ್: ಬಿದರಿ, ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 12 ರಿಂದ 14 ರ ವರೆಗೆ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ‘ಬಿದರಿ ಉತ್ಸವ 2022’ ಏರ್ಪಡಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

12 ರಂದು ಮಧ್ಯಾಹ್ನ 2ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಬಿದರಿ ಕ್ರೀಡೋತ್ಸವ ನಡೆಯಲಿದೆ. ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡುವರು. ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸುವರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯಕುಮಾರ ಪಾಟೀಲ ಗಾದಗಿ, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಕೋಬಾಳಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಸಾಗರ ದಾಂಡೇಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸದಾಶಿವ ಬಡಿಗೇರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ, ವೇದಿಕೆ ಖಜಾಂಚಿ ಪವನ್ ಸೌದಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಾವಿದ ರಾಜೇಶ ಕುಲಕರ್ಣಿ ಹಾಗೂ ತಂಡದವರು ಸಂಗೀತ ಸಂಜೆ ನಡೆಸಿಕೊಡುವರು.

ಚಿತ್ರಕಲೆ, ದೇಸಿ ಕ್ರೀಡೆ:
13 ರಂದು ಬೆಳಿಗ್ಗೆ 9ಕ್ಕೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜರುಗುವ ಬಿದರಿ ಚಿತ್ರಕಲಾ ಸ್ಪಧೆಯನ್ನು ಮಾಜಿ ಶಾಸಕ ಅಶೋಕ ಖೇಣಿ ಉದ್ಘಾಟಿಸುವರು.
ಪ್ರಮುಖರಾದ ಡಾ. ಅಬ್ದುಲ್ ಖದೀರ್, ಬಸವರಾಜ ಧನ್ನೂರ, ಯೋಗೇಶ ಮಠದ, ಬಸವರಾಜ ಪಿ. ಭತಮುರ್ಗೆ, ಫರ್ನಾಂಡೀಸ್ ಹಿಪ್ಪಳಗಾಂವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ದೇಸಿ ಕ್ರೀಡೆಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಚಾಲನೆ ನೀಡುವರು. ಬೆಳಿಗ್ಗೆ 10ಕ್ಕೆ ಬಿದರಿ ಸಾಂಸ್ಕೃತಿಕ ಸಂಗಮವನ್ನು ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಹಿರಿಯ ರಂಗಕರ್ಮಿ ಜಿ. ಕಪ್ಪಣ್ಣ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕ.ರಾ.ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಭಾಗವಹಿಸುವರು. ಮಧ್ಯಾಹ್ನ 12 ರಿಂದ 1 ರವರೆಗೆ ನೃತ್ಯ ರೂಪಕ, ಮಧ್ಯಾಹ್ನ 3 ರಿಂದ ಜನಪದ ಗಾಯನ ಸ್ಪರ್ಧೆ ಜರುಗಲಿದೆ.
14 ರಂದು ಬೆಳಿಗ್ಗೆ 10ಕ್ಕೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬಿದರಿ ಸಂಗೀತ ಸಂಭ್ರಮ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷೆ ರೇಖಾ ಅಪ್ಪಾರಾವ್ ಸೌದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT