ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಗಡಿಯಲ್ಲಿ ಬೀದರ್‌ ಬಿಜೆಪಿ ಮುಖಂಡನ ಶವ ಪತ್ತೆ

Published 9 ಜೂನ್ 2024, 0:14 IST
Last Updated 9 ಜೂನ್ 2024, 0:14 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿನ ಬಿಜೆಪಿ ಮುಖಂಡ, ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ ಅವರ ಮೃತದೇಹ ನೆರೆಯ ಮಹಾರಾಷ್ಟ್ರದ ಉಸ್ಮಾನಾಬಾದ್‌ ಜಿಲ್ಲೆಯ ಉಮರ್ಗಾ ಬಳಿಯ ಹೆದ್ದಾರಿ ಪಕ್ಕ ಶನಿವಾರ ಬೆಳಗಿನ ಜಾವ ಪತ್ತೆಯಾಗಿದೆ.

ಮೃತದೇಹ ಸಿಕ್ಕಾಗ ಅವರ ಮುಖದ ಮೇಲೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತಸಿಕ್ತವಾಗಿತ್ತು. ಘಟನೆಗೆ ಕಾರಣವೇನು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.

ಚಾಂದಿವಾಲೆ ಅವರ ಕಿಸೆಯಲ್ಲಿ ದೊರೆತ ಬಸ್‌ ಟಿಕೆಟ್‌ ಆಧರಿಸಿ ಮಹಾರಾಷ್ಟ್ರ ಪೊಲೀಸರು ಜಿಲ್ಲೆಯ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಕುಟುಂಬಸ್ಥರು ಉಮರ್ಗಾಕ್ಕೆ ತೆರಳಿದ್ದಾರೆ.

ಭಾಲ್ಕಿ ತಾಲ್ಲೂಕಿನ ಲಖನಗಾಂವ್‌ ಗ್ರಾಮದ ನಿವಾಸಿಯಾದ ಚಾಂದಿವಾಲೆ ಕೆಲ ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು. 2008ರಿಂದ ನಗರದ ಬರೀದ್‌ ಷಾಹಿ ಉದ್ಯಾನದಲ್ಲಿ ಉಚಿತ ಯೋಗ ಶಿಬಿರ ನಡೆಸುತ್ತಿದ್ದರು. ಬಿಜೆಪಿಯಲ್ಲೂ ಸಕ್ರಿಯರಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾಲ್ಕಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT