ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಕರ್ನಾಟಕ ಪದವಿ ಕಾಲೇಜಿಗೆ 4ನೇ ಸಲ ನ್ಯಾಕ್‌ನಿಂದ ‘ಎ+’ ಮಾನ್ಯತೆ

Published 20 ಅಕ್ಟೋಬರ್ 2023, 14:34 IST
Last Updated 20 ಅಕ್ಟೋಬರ್ 2023, 14:34 IST
ಅಕ್ಷರ ಗಾತ್ರ

ಬೀದರ್‌: ‘ನಗರದ ಕರ್ನಾಟಕ ಪದವಿ ಕಾಲೇಜಿಗೆ ನ್ಯಾಕ್‌ನಿಂದ ನಾಲ್ಕನೇ ಸಲ ‘ಎ+’ ಮಾನ್ಯತೆ ದೊರೆತಿದೆ. ಬೀದರ್‌ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ‘ಎ+’ ಶ್ರೇಣಿ ಪಡೆದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದರು.

‘ಎ+’ ಮಾನ್ಯತೆ ಸಿಕ್ಕ ಹಿನ್ನೆಲೆಯಲ್ಲಿ ನಗರದ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಡವರಿಗೆ ಅತಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಿಂದ ನೀಡಲಾಗುತ್ತಿದೆ. ನ್ಯಾಕ್‌ ಕೊಟ್ಟಿರುವ ಮಾನ್ಯತೆಯಿಂದ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ’ ಎಂದು ಹೇಳಿದರು.

ಈ ಸಾಧನೆಗೆ ಶಿಕ್ಷಣ ಪ್ರೇಮಿ ಪ್ರೊ. ಬಿ.ಜಿ.ಮೂಲಿಮನಿ, ಪ್ರಾಚಾರ್ಯರು, ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಕರು, ಕ್ರೀಡಾ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಕಾರಣ. ಅವರೆಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.

ನ್ಯಾಕ್‌ನಿಂದ ದೊರೆತಿರುವ ಈ ಮಾನ್ಯತೆಯಿಂದ ಕರ್ನಾಟಕ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವಾಗ, ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಬಹಳ ಅನುಕೂಲವಾಗಲಿದೆ’ ಎಂದು ಹೇಳಿದರು.

ಪ್ರೊ. ಬಿ.ಜಿ ಮೂಲಿಮನಿ ಮಾತನಾಡಿ,‘ಕಲ್ಯಾಣ ಕರ್ನಾಟಕ ಭಾಗವನ್ನು ಹಿಂದುಳಿದ ಭಾಗವೆಂದು ಕರೆಯುತ್ತಾರೆ. ಆದರೆ ನಮ್ಮಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕಾಗಿದೆ. ಕರ್ನಾಟಕ ಕಾಲೇಜು ಗುಣಮಟ್ಟದ ಶಿಕ್ಷಣದ ಮೂಲಕ ಈ ಭಾಗದಲ್ಲಿ ಬದಲಾವಣೆಗೆ ಶ್ರಮಿಸುತ್ತಿರುವುದು ಉತ್ತಮ ಕೆಲಸ’ ಎಂದು ಕೊಂಡಾಡಿದರು.

ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ, ಕರ್ನಾಟಕ ರಾಷ್ಟ್ರೀಯ ನ್ಯಾಸ್‌ದ ಅಧ್ಯಕ್ಷ ಡಾ. ಬಿ.ಜಿ. ಪಾಟೀಲ, ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ. ಶೆಟಕಾರ, ನ್ಯಾಸದ ಕಾರ್ಯದರ್ಶಿ ಮಡಿವಾಳಪ್ಪ ಗಂಗಶೆಟ್ಟಿ, ಕಾರ್ಯದರ್ಶಿ ಸಿದ್ರಾಮ ಪಾರಾ, ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಸಚಿನ್‌ ವಿಶ್ವಕರ್ಮ, ರಾಜೇಂದ್ರ ಬಿರಾದಾರ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT