ಗುರುವಾರ , ಸೆಪ್ಟೆಂಬರ್ 16, 2021
25 °C

ಬೈಕ್‍ಗೆ ವಾಹನ ಡಿಕ್ಕಿ: ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬೈಕ್‍ಗೆ ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆದು ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಬೀದರ್ ತಾಲ್ಲೂಕಿನ ಕೊಳಾರ (ಕೆ) ಸಮೀಪ ಮಂಗಳವಾರ ಸಂಭವಿಸಿದೆ.

ಆಣದೂರು ಗ್ರಾಮದ ಮಾರುತಿ ಶಿವರಾಜ ಚೊಂಡಿ (26) ಹಾಗೂ ಸದ್ಯ ಆಣದೂರಿನಲ್ಲಿ ನೆಲೆಸಿರುವ ಅಮಲಾಪುರದ ಗೋಪಾಲ ರಾಜಪ್ಪ ಸಾಗರ್ (40) ಎಂಬುವರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ವಾಹನದ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.

ಪಿಎಸ್‍ಐ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೀದರ್‌ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು