ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿಗೆ ವಿಭಿನ್ನ ಪ್ರಯತ್ನ; ಗಮನ ಸೆಳೆದ ಸ್ವೀಪ್ ಸಮಿತಿಯ ಬೈಕ್ ರ‍್ಯಾಲಿ

ನೂರಾರು ಜನರು ಭಾಗಿ
Last Updated 9 ಏಪ್ರಿಲ್ 2019, 15:12 IST
ಅಕ್ಷರ ಗಾತ್ರ

ಬೀದರ್: ಮತದಾನ ಜಾಗೃತಿಗೆ ವಿಭಿನ್ನ ಪ್ರಯತ್ನಗಳನ್ನು ಮುಂದುವರಿಸಿರುವ ಸ್ವೀಪ್ ಸಮಿತಿಯು ನಗರದಲ್ಲಿ ಮಂಗಳವಾರ ಬೈಕ್ ರ‍್ಯಾಲಿ ನಡೆಸಿತು.

ನೂರಾರು ಜನ ಬೈಕ್‌ಗಳೊಂದಿಗೆ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಮತದಾನ ಜಾಗೃತಿ ಕಾರ್ಯಕ್ಕೆ ಕೈಜೋಡಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅವರೂ ಬಿಸಿಸಲ್ಲೇ ಬೈಕ್‌ನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗಮನ ಸೆಳೆದರು.

‘ಮತದಾನ ನಮ್ಮ ಸಂವಿಧಾನ ಬದ್ಧ ಹಕ್ಕು, ಎಲ್ಲರೂ ತಪ್ಪದೇ ಮತದಾನ ಮಾಡಿ’ ಎನ್ನುವ ಬ್ಯಾನರ್ ಅಳವಡಿಸಿದ್ದ ವಾಹನವು ರ‍್ಯಾಲಿಯ ಮುಂಚೂಣಿಯಲ್ಲಿ ಇತ್ತು.

ದ್ವಿಚಕ್ರ ವಾಹನ ಸವಾರರು ‘ಪ್ರೌಢ್ ಟು ಬಿ ಎ ವೋಟರ್ ಟು ವೋಟ್’, ‘ಅಂಗವಿಕಲರಿಗೆ ಮತ್ತು ಅಶಕ್ತರಿಗೆ ಅಗತ್ಯ ನೆರವು’, ‘ನೋ ವೋಟರ್ ಟು ಬಿ ಲೆಫ್ಟ್ ಬಿಹೈಂಡ್’ ಎಂಬಿತ್ಯಾದಿ ಬರಹಗಳನ್ನು ಹೊಂದಿದ್ದ ಪ್ಲೇ ಕಾರ್ಡ್‌ಗಳನ್ನು ಪ್ರದರ್ಶಿಸಿದರು.

‘ನನ್ನ ಮತ ನನ್ನ ಹಕ್ಕು’, ‘ಮಾಡುವೇವು, ಮಾಡುವೇವು, ಮತದಾನ ಮಾಡುವೇವು’ ಎನ್ನುವ ಘೋಷಣೆಗಳನ್ನು ಕೂಗಿ ಮತದಾನದ ಅರಿವು ಮೂಡಿಸಿದರು.

ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆರಂಭವಾದ ರ್‌್ಯಾಲಿಯು ಶಿವನಗರ, ಕೇಂದ್ರ ಬಸ್ ನಿಲ್ದಾಣ, ಮಡಿವಾಳ ಮಾಚಿದೇವ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಡಾ. ಅಂಬೇಡ್ಕರ್ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತದ ಮಾರ್ಗವಾಗಿ ಬಿ.ಬಿ. ಭೂಮರಡ್ಡಿ ಕಾಲೇಜು ತಲುಪಿ ಮುಕ್ತಾಯಗೊಂಡಿತು.

ಇದಕ್ಕೂ ಮುನ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಹಾಂತೇಶ ಬೀಳಗಿ ಹಸಿರು ನಿಶಾನೆ ತೋರಿಸಿ ರ‍್ಯಾಲಿಗೆ ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ. ಜಬ್ಬಾರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗೆ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಅವಿನಾಶ, ಚುನಾವಣಾ ಮಾಸ್ಟರ್ ಟ್ರೇನರ್ ಡಾ. ಗೌತಮ ಅರಳಿ, ರಮೇಶ ಮಠಪತಿ, ಶಿವಶಂಕರ ಟೋಕರೆ, ವಿರೂಪಾಕ್ಷ ಗಾದಗಿ ಭಾಗವಹಿಸಿದ್ದರು.

ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಸ್ವೀಪ್ ಸಮಿತಿಯು ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಮಹತ್ವವನ್ನು ಮತದಾರರಿಗೆ ಮನವರಿಕೆ ಮಾಡಿಕೊಡುತ್ತಿದೆ. ಈ ಮೂಲಕ ಮತ ಪ್ರಮಾಣ ಹೆಚ್ಚಿಸಲು ಪ್ರಯತ್ನಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT