ಬುಧವಾರ, ಜೂನ್ 29, 2022
26 °C

ಅಪಘಾತ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ತೋರಣಾ ಗ್ರಾಮದ ಡೋಣಗಾಂವ್(ಎಂ) ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಹಂದಿಕೇರಿ ಗ್ರಾಮದ ಸಂತೋಷ ಭೀಮರಾವ ಬಳತೆ (35) ಮೃತಪಟ್ಟವರು.

ಚಿಮೆಗಾಂವ್ ಗ್ರಾಮದಿಂದ ಬೆಡಕುಂದಾ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾಲ್ಕಿ ಡಿವೈಎಸ್‍ಪಿ ಪೃಥ್ವಿಕ್ ಶಂಕರ, ಸಿಪಿಐ ರಾಮಪ್ಪ ಸಾವಳಗಿ, ಅಪರಾಧ ವಿಭಾಗದ ಪಿಎಸ್‍ಐ ಬಸವರಾಜ ಪಾಟೀಲ, ಸಿಬ್ಬಂದಿ ಮಲ್ಲಿಕಾರ್ಜುನ, ದಿಲೀಪಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.