ಶುಕ್ರವಾರ, ಅಕ್ಟೋಬರ್ 29, 2021
20 °C

ಬೀದರ್‌: ಪ್ರಧಾನಿ ಮೋದಿ ಜೀವನ ಚರಿತ್ರೆ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಕುರಿತ ಪ್ರದರ್ಶನ ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆಯಿತು.

ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಜಂಟಿಯಾಗಿ ದೀಪ ಬೆಳಗಿಸುವ ಮೂಲಕ ಪ್ರದರ್ಶನ ಉದ್ಘಾಟಿಸಿದರು. ನಂತರ ಭಾರತ ಮಾತೆ ಭಾವಚಿತ್ರ ಹಾಗೂ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ವಿಭಾಗ ಸಹ ಪ್ರಭಾರಿ ಈಶ್ವರ್‌ಸಿಂಗ್ ಠಾಕೂರ್, ಜಿಲ್ಲಾ ಸಂಚಾಲಕ ಮಹೇಶ್ವರ ಸ್ವಾಮಿ, ರಾಜಕುಮಾರ ಪಾಟೀಲ, ಹಿರಿಯ ಮುಖಂಡರಾದ ಗುರುನಾಥ ಕೊಳ್ಳೂರ್, ಬಾಬುರಾವ್‌ ಕಾರಭಾರಿ, ಹಣಮಂತ ಬುಳ್ಳಾ, ಡಿ.ಕೆ.ಸಿದ್ರಾಮ, ಗುರುನಾಥ ಜ್ಯಾಂತಿಕರ್, ರೇವಣಸಿದ್ದಪ್ಪ ಜಲಾದೆ, ಸಂಗಮೇಶ ನಾಸಿಗಾರ ಇದ್ದರು.

ಖಾದಿ ಬಟ್ಟೆ ಖರೀದಿಸಿದ ಸಚಿವರು
ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ನಗರದ ಖಾದಿ ಭಂಡಾರಕ್ಕೆ ತೆರಳಿ ಖಾದಿ ಬಟ್ಟೆಗಳನ್ನು ಖರೀದಿ ಮಾಡುವ ಮೂಲಕ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆಯ ಸಂದೇಶ ನೀಡಿದರು.

ನಗರದ ಸರ್ಕಾರಿ ಆಸ್ಪತ್ರೆಯ ಎದುರಿನ ಉದಗಿರ ರಸ್ತೆಯಲ್ಲಿರುವ ಖಾದಿ ಭಂಡಾರದಲ್ಲಿ ಸಚಿವರು ತಮಗೆ ಇಷ್ಟವಾದ ಖಾದಿ ಬಟ್ಟೆಗಳನ್ನು ಖರೀದಿಸಿದರು. ತಮ್ಮ ಜತೆಗಿದ್ದ ಕಾರ್ಯಕರ್ತರು, ಅಭಿಮಾನಿಗಳಿಗೂ ಕೂಡ ತಲಾ ಒಂದು ಶರ್ಟ್ ಮತ್ತು ಕರವಸ್ತ್ರವನ್ನು ಖರೀದಿಸಿ ನೀಡಿದರು. ಈ ಮೂಲಕ ಸ್ವದೇಶಿ ವಸ್ತುಗಳನ್ನು ಪ್ರತಿಯೊಬ್ಬರೂ ಬಳಸಿರಿ ಎನ್ನುವ ಸಂದೇಶ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ರಘುನಾಥ ಮಲ್ಕಾಪೂರೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.