ಭಾಲ್ಕಿ: ಕೇಂದ್ರ ಪುರಸ್ಕೃತ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸಂಬಂಧ ಪಟ್ಟ ಶಾಲೆಯ ನೋಡಲ್ ಅಧಿಕಾರಿ/ ಸಬಲೀಕರಣ ಅಧಿಕಾರಿಯ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ದೃಢೀಕರಣ ಕಡ್ಡಾಯಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಕುಮಾರ ಸಂಗನ್ ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಎಸ್ಎಸ್ಎಸ್ಪಿ ತಂತ್ರಾಂಶದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಮತ್ತು ಪಡಿತರ ಚೀಟಿಯೊಂದಿಗೆ ಅರ್ಜಿಯನ್ನು ಸಲ್ಲಿಸಿ ವಿವರಗಳು ಸರಿಯಾಗಿದ್ದಲ್ಲಿ ಬಯೋಮೆಟ್ರಿಕ್ ಇ-ದೃಢೀಕರಣ ಮಾಡಬೇಕು. ಬಯೋಮೆಟ್ರಿಕ್ ಇ-ದೃಢೀಕರಣ ಪ್ರಕ್ರಿಯೆಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಭಾಲ್ಕಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಶಾಲಾ-ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಸಲ್ಲಿಸಿದ ವಿವರಗಳಿಗೆ ಬಯೋಮೆಟ್ರಿಕ್ ಇ-ದೃಢೀಕರಣ ಮಾಡುವುದಕ್ಕಾಗಿ ಸಂಸ್ಥೆಯ ನೋಡಲ್ ಅಧಿಕಾರಿ/ಸಬಲೀಕರಣ ಅಧಿಕಾರಿಗಳನ್ನು ಆಯ್ಕೆ ಮಾಡಿ ಅವರಿಂದ ಬಯೋಮೆಟ್ರಿಕ್ ಇ-ದೃಢೀಕರಣ ಮಾಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.