ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅಭಿವೃದ್ಧಿ ಕಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವ ಮುಖಂಡರು'

Last Updated 25 ಆಗಸ್ಟ್ 2021, 5:37 IST
ಅಕ್ಷರ ಗಾತ್ರ

ಔರಾದ್: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಮುಖಂಡಧೋಡಿಬಾ ನರೋಟೆ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತದ ಅವಧಿ ಹಾಗೂ ಈಗಿನ ಬಿಜೆಪಿ ಸರ್ಕಾರದ ಜನಪರ ಆಡಳಿತದ ಕುರಿತು ಜನರು ತುಲನೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ವಿಭಾಗೀಯ ಪ್ರಮುಖ ಈಶ್ವರಸಿಂಗ ಠಾಕೂರ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಿರೀಶ್ ವಡೆಯರ್, ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ್, ಬಿಜೆಪಿ ಧುರೀಣ ಬಾಬುರಾವ ಮದಕಟ್ಟಿ, ಹರಹಂತ ಸಾವಳೆ, ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಕೇರಬಾ ಪವಾರ್, ಕುಮಾರ ದೇಶಮುಖ, ಶ್ರೀನಿವಾಸ ಖೂಬಾ, ಶೀಮಂತ ಪಾಟೀಲ ಹೆಡಗಾಪುರ, ಅಮೃತರಾವ ವಟಗೆ, ಪ್ರಕಾಶ ಜೀರ್ಗೆ, ರಾಮ ನರೋಟೆ, ಬಾಲಾಜಿ ನರೋಟೆ ಇದ್ದರು. ಸಭೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುಂಡಪ್ಪ ‌ಮುದಾಳೆ, ಎಪಿಎಂಸಿ ಸದಸ್ಯ ಗೋವಿಂದರಾವ್ ಸೇರಿದಂತೆ ಹಲವರು ಬಿಜೆಪಿ ಸೇರಿದರು.

‘ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ’

ಔರಾದ್: ಧೋಂಡಿಬಾ ನರೋಟೆ ಹಾಗೂ ಅವರ ಬೆಂಬಲಿಗರು ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ಇಲ್ಲಿ ಒಬ್ಬರು, ಇಬ್ಬರು ಪಕ್ಷ ಬಿಟ್ಟು ಹೋದರೆ ಏನೂ ಅಗದು. ಬಿಜೆಪಿಯ ನೂರಾರು ಜ‌ನ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದರು.

ಕಾಂಗ್ರೆಸ್ ಧುರೀಣ ಆನಂದ ಚವಾಣ್, ಸುಧಾಕರ್ ಕೊಳ್ಳೂರ, ಸಾಯಿಕುಮಾರ ಘೋಡ್ಕೆ, ಶರಣಪ್ಪ ಪಾಟೀಲ, ಶಂಕರ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT