ಸೋಮವಾರ, ಮೇ 17, 2021
28 °C

ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ: ಮಲ್ಲಿಕಾರ್ಜುನ ಖೂಬಾ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ (ಬೀದರ್ ಜಿಲ್ಲೆ): ‘ನನ್ನ ಚುನಾವಣಾ ಪ್ರಚಾರಕ್ಕಾಗಿ ಬ್ಯಾನರ್ ಅಳವಡಿಸಿದ್ದ ವಾಹನದ ಮೇಲೆ ಹುಲಸೂರ ಬಳಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ’ ಎಂದು ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ಠಾಣೆಗೆ ದೂರು ನೀಡಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ (ಏಪ್ರಿಲ್ 12) ಪ್ರಚಾರ ಸಭೆಗೆ ಇಲ್ಲಿಗೆ ಬರುತ್ತಿದ್ದು, ಅವರ ಸಭೆಗೆ ನುಗ್ಗಿ ನ್ಯಾಯ ಕೇಳುವೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಟಿಕೆಟ್ ಕೊಡಲು ಕಾರಣವೇನು ಎಂದೂ ಪ್ರಶ್ನಿಸುವೆ’ ಎಂದರು.

‘ನಗರದ 6 ಸ್ಥಳಗಳಲ್ಲಿ ರಾಜಾರೋಷವಾಗಿ ಮತದಾರರಿಗೆ ಹಣ ಹಂಚಲಾಗುತ್ತಿದೆ. ಇದಲ್ಲದೆ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಹಾಗೂ ತಹಶೀಲ್ದಾರ್ ಆಗಿರುವ ಅವರ ಪತ್ನಿ ಸಾವಿತ್ರಿ ಸಲಗರ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮೂರು ಸ್ಥಳಗಳಲ್ಲಿ ಇವೆ’ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.