ಬುಧವಾರ, ಜನವರಿ 19, 2022
23 °C

ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಗೆಲುವಿಗೆ ಶ್ರಮಿಸಿ: ಪ್ರಭು ಚವಾಣ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾತ್ರ ತ್ವರಿತ ಪ್ರಗತಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ತಾಲ್ಲೂಕಿನ ಹಾಲಹಳ್ಳಿ, ಬ್ಯಾಲಹಳ್ಳಿ, ಮದಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಪ್ರಕಾಶ ಖಂಡ್ರೆ ಅವರ ಗೆಲುವಿಗಾಗಿ ಅವಿರತ ಶ್ರಮಿಸಬೇಕು. ಆಗ ಮಾತ್ರ ಜಿಲ್ಲೆಯಲ್ಲಿ ಪಕ್ಷ ಬಲಶಾಲಿಯಾಗಲು ಸಾಧ್ಯ’ ಎಂದರು.

ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಮುಖಂಡರಾದ ಡಿ.ಕೆ ಸಿದ್ರಾಮ, ಅರಿಹಂತ ಸಾವಳೆ, ಮಂಡಲ ಅಧ್ಯಕ್ಷ ಪಂಡಿತ ಶಿರೋಳೆ ಮತ್ತು ಪ್ರಮುಖರು ಇದ್ದರು.

ಬಿಜೆಪಿ ಪ್ರಚಾರ ಸಭೆ ಇಂದು

ಬೀದರ್: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಬೀದರ್ ತಾಲ್ಲೂಕಿನ ಕಮಠಾಣ ಹಾಗೂ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿಯಲ್ಲಿ ಬುಧವಾರ (ಡಿ.1) ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್ ತಿಳಿಸಿದ್ದಾರೆ.

ಕಮಠಾಣದ ಎಸ್.ಎಸ್. ಪಾಟೀಲ ಫಂಕ್ಷನ್ ಹಾಲ್‍ನಲ್ಲಿ ಮಧ್ಯಾಹ್ನ 1 ಹಾಗೂ ಮನ್ನಾಎಖ್ಖೆಳ್ಳಿಯ ಆರ್ಯ ಸಮಾಜ ಭವನದಲ್ಲಿ ಮಧ್ಯಾಹ್ನ 3ಕ್ಕೆ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಕೇಂದ್ರದ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಶಾಸಕ ಶರಣು ಸಲಗರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಚುನಾವಣಾ ಉಸ್ತುವಾರಿ ಶಿವರಾಜ ಗಂದಗೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಕಿರಣ್ ಪಾಟೀಲ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು