ಭಾನುವಾರ, ಜೂನ್ 20, 2021
28 °C

ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ : ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ ಕಾಡುತ್ತಿದೆ’ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಅನ್ನು ಈ ತಾಲ್ಲೂಕು ಹಾಗೂ ಬೀದರ್‌ ಜಿಲ್ಲೆಯವರನ್ನು ಬಿಟ್ಟು ಬೇರೆ ಜಿಲ್ಲೆಯವರಿಗೆ ಕೊಡಲಾಗಿದೆ. ಡೀಲ್‌ ಆರೋಪ ಸತ್ಯವೋ, ಮಿಥ್ಯವೋ ತಿಳಿದುಕೊಳ್ಳಬೇಕಿದೆ’ ಎಂದು ಅವರು ಪ್ರತಿಕ್ರಿಯಿಸಿದರು.

‘ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ನಂಬಿ ಜೆಡಿಎಸ್‌ ಶಾಸಕ ಇದ್ದಾಗಲೇ ಬಿಜೆಪಿ ಸೇರಿದ್ದೆ. ನನ್ನನ್ನು ಕಡೆಗಣಿಸಿ ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ’ ಎಂದು ಅಸಮಾಧಾನ
ವ್ಯಕ್ತಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು