ಮಂಗಳವಾರ, ಸೆಪ್ಟೆಂಬರ್ 21, 2021
26 °C
ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಯಡಿಯೂರಪ್ಪ ಕೆಳಗಿಳಿಸಿದರೆ ಬಿಜೆಪಿ ಸರ್ಕಾರ ಪತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ (ಬೀದರ್‌ ಜಿಲ್ಲೆ): ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಮತ್ತೆ ಇತಿಹಾಸ ಮರುಕಳಿಸಲಿದೆ. ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇಲ್ಲಿಯ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಎಚ್ಚರಿಸಿದ್ದಾರೆ.

ನಾಯಕತ್ವ ಬದಲಾವಣೆ ಅಪ್ರಸ್ತುತ. ಯಡಿಯೂರಪ್ಪ ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ದೊಡ್ಡ ನಷ್ಟವಾಗಲಿದೆ. ಲಿಂಗಾಯತ ಸಮುದಾಯ ಬಿಜೆಪಿಯಿಂದ ದೂರ ಸರಿಯಲಿದೆ. ಅವಧಿ ಮುಗಿಯುವ ವರೆಗೂ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಅವರು ಜನಪರ-ಜೀವಪರ ಆಡಳಿತ ನಡೆಸುತ್ತಿದ್ದಾರೆ. ಜಾತ್ಯತೀತವಾಗಿ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ನೂತನ ಅನುಭವ ಮಂಟಪ ಸೇರಿದಂತೆ ಅನೇಕ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತಂದಿದ್ದಾರೆ. ಜನ ಬೆಂಬಲದ ಜತೆಗೆ ಪಕ್ಷಾತೀತವಾಗಿ ಅನೇಕ ನಾಯಕರ ಬೆಂಬಲವೂ ಅವರಿಗೆ ಇದೆ. ಆದರೂ ಸ್ವಪಕ್ಷದ ಕೆಲ ನಾಯಕರು ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು