ಭಾನುವಾರ, ಅಕ್ಟೋಬರ್ 25, 2020
28 °C

ಬಿಜೆಪಿಗಿದೆ ತತ್ವ, ಸಿದ್ಧಾಂತ: ತೂಗಾಂವಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಿಜೆಪಿಗೆ ತನ್ನದೇ ಆದ ತತ್ವ, ಸಿದ್ಧಾಂತ ಇದೆ. ಪಕ್ಷ ಸದಾ ಅದನ್ನು ಪಾಲಿಸಿಕೊಂಡು ಹೋಗುತ್ತಿದೆ ಎಂದು ಬಿಜೆಪಿ ಕಲಬುರ್ಗಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ತೂಗಾಂವಕರ್ ಹೇಳಿದರು.

ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ನಡೆದ ಯುವ ಮೋರ್ಚಾ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪಕ್ಷ ಶಿಸ್ತಿಗೆ ಹೆಸರಾಗಿದೆ. ಕಾರ್ಯಕರ್ತರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ಮಾಡಿದರು.

ಯುವ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಕಿರಣ ಪಾಲಂ, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಾತನಾಡಿದರು.
ವಿಭಾಗ ಸಹ ಪ್ರಭಾರಿ ಈಶ್ವರಸಿಂ ಠಾಕೂರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ್ ಉಪಸ್ಥಿತರಿದ್ದರು.

ಶಿವಕುಮಾರ ಸ್ವಾಮಿ ನಿರೂಪಿಸಿದರು. ದೀಪಕ್ ಗುಡ್ಡಾ ಸ್ವಾಗತಿಸಿದರು. ಜನಾರ್ಧನ್ ರೆಡ್ಡಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.