ಗುರುವಾರ , ನವೆಂಬರ್ 21, 2019
25 °C

ರಾಷ್ಟ್ರ ಮಾರಾಟಕ್ಕಿಟ್ಟ ಬಿಜೆಪಿ: ಟೀಕೆ

Published:
Updated:

ಬೀದರ್‌: ‘ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ರಾಷ್ಟ್ರವನ್ನು ಮಾರಲು ಹೊರಟಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದರು.

ನಗರದಲ್ಲಿ ಭಾನುವಾರ ಶೋಷಿತ ವರ್ಗಗಳ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಆರ್‌ಸಿಇಪಿ ವಿರುದ್ಧ ಶೀಘ್ರವೇ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

‘ಆರ್‌ಸಿಇಪಿಯಿಂದ ಬಹುರಾಷ್ಟ್ರೀಯ ಕಂಪನಿಗಳಿಗೆ ಹೆಚ್ಚಿನ ಲಾಭವಾಗಲಿದೆ. ಕೃಷಿ ಉತ್ಪನ್ನಗಳ ಬೆಲೆ ಕುಸಿದು ರೈತರು ಸಂಕಷ್ಟ ಅನುಭವಿಸುವರು. ಒಪ್ಪಂದವು ರೈತರ ಪಾಲಿಕೆ ನರಕವಾಗಲಿದ್ದು, ಕೇಂದ್ರದ ನಿರ್ಧಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯವನ್ನು ತಂದೊಡ್ಡಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

 

ಪ್ರತಿಕ್ರಿಯಿಸಿ (+)