ಸೋಮವಾರ, ಸೆಪ್ಟೆಂಬರ್ 20, 2021
28 °C
ಹುಮನಾಬಾದ್: ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆ

ಕಾಂಗ್ರೆಸ್‌ ಪಕ್ಷದಿಂದ ಕೇವಲ ಕುಟುಂಬ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿಕೊಂಡು ದೇಶದ ದಿನ ದಲಿತರ ಮತ್ತು ಕೃಷಿಕರ ಭವಿಷ್ಯದ ಮೇಲೆ ಕಲ್ಲು ಹಾಕಿ ಕೇವಲ ತಮ್ಮ ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಪಟ್ಟಣದ  ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಜನಾಶೀರ್ವಾದ ಯಾತ್ರೆಯ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಮತ್ತು ರಾಜ್ಯದಲ್ಲಿ ಹೀನಾಯವಾಗಿ ಸೋಲಿಸುವ ಮೂಲಕ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ. ಅದೇ ರೀತಿ ಹುಮನಾಬಾದ್ ಮತ್ ಕ್ಷೇತ್ರ ಸೇರಿದಂತೆ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 7 ವರ್ಷದ ಅವಧಿಯಲ್ಲಿ ಭಾರತ ದೇಶ ಸ್ವಾಲಂಬಿಯಾಗಿ ನಿಲ್ಲಬೇಕೆನ್ನುವ ಛಲದೊಂದಿಗೆ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತ ಬೆಳೆಯುವುದು ಸಹಿಸಲು ಅಗುವುದಿಲ್ಲ. ಆದರೆ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನು ಸಹ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಧನೆಗಳನ್ನು ಹಾಗೂ ಕಾಂಗ್ರೆಸ್‍ನ ವೈಫಲ್ಯಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸಬೇಕು ಎಂದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮೋದಿ ಅವರು ನೂತನ ಸಚಿವ ಸಂಪುಟದಲ್ಲಿ ಎಲ್ಲಾ ವರ್ಗದ ಜನರಿಗೆ ಆದತ್ಯೆ ನೀಡಿರುವುದರಿಂದ ಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ದೊರೆಯುವುದಿಲ್ಲ ಎಂಬ ಭಯದಿಂದ ಸಚಿವರ ಪರಿಚಯ ಮಾಡದಂತೆ ಅಡ್ಡಿ ಪಡಿಸಲಾಗಿದೆ. ಹೀಗಾಗಿ ಜನಾಶೀರ್ವಾದ ಯಾತ್ರೆ ಮೂಲಕ ದೇಶದ ಜನರ ಆಶೀರ್ವಾದ ಪಡೆಯಲಾಗುತ್ತಿದೆ ಎಂದರು.

ಬಿಜೆಪಿ ಮುಖಂಡ ಸಿದ್ದು ಪಾಟೀಲ ಮಾತನಾಡಿ, ಹುಮನಾಬಾದ್‌ನಲ್ಲಿ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಇಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಬೇಕು ಹಾಗೂ ಹುಮನಾಬಾದ್‍ದಿಂದ ಯಶವಂತಪುರ ರೈಲ್ವೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಮಾಡಿದರು.

ಶಾಸಕ ಶರಣು ಸಲಗರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಬಿಎಸ್‍ಎಸ್‍ಕೆ ಅಧ್ಯಕ್ಷ ಸುಭಾಷ ಕಲ್ಲೂರ, ಪಕ್ಷದ ಪ್ರಮುಖರಾದ ಸೋಮನಾಥ ಪಾಟೀಲ, ಬಸವರಾಜ ಆರ್ಯ, ಮಲ್ಲಿಕಾರ್ಜುನ ಪ್ರಭಾ, ಪದ್ಮಾಕರ್ ಪಾಟೀಲ, ರಫೋದ್ದಿನ್ ಕಚೇರಿವಾಲೆ ಮಾತನಾಡಿದರು. ಪಕ್ಷದ ಮುಖಂಡರಾದ ಗುಂಡುರೆಡ್ಡಿ, ಕೆ.ಎಂ. ಗಜೇಂದ್ರ, ಅಶೋಕ ಖರಟಮಲ್, ಸುಭಾಷ ಗಂಗಾ, ವಿಶ್ವನಾಥ ಇದ್ದರು.

ಕೋವಿಡ್ ನಿಯಮ ಉಲ್ಲಂಘನೆ

ಹುಮನಾಬಾದ್ ಪಟ್ಟಣದ ಬಿಜೆಪಿ ಕಚೇರಿಯಿಂದ ಪ್ರಮುಖ ರಸ್ತೆಯ ಮೂಲಕ ವೀರಭದ್ರೇಶ್ವರ ಕಲ್ಯಾಣ ಮಂಟಪದವರೆಗೆ ಜನಾಶಿರ್ವಾದ ಯಾತ್ರೆಯ ಭವ್ಯ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮುಖಂಡರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದರು.

ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ ಕರಂದ್ಲಾಜೆ ಅವರಿಗೆ ಭವ್ಯ ಸ್ವಾಗತದೊಂದಿಗೆ ತೆರೆದ ವಾಹನದಲ್ಲಿ ಶಿವಚಂದ್ರ, ಡಾ.ಬಿ.ಆರ್. ಅಂಬೇಡ್ಕರ, ಸರ್ದಾರ ಪಟೇಲ್, ಬಾಲಾಜಿ,  ಬಸವೇಶ್ವರ ವೃತ್ತಗಳಲ್ಲಿ ಮಾರ್ಲಾಪಣೆ ಮಾಡುವ ಮೂಲಕ ಕಲ್ಯಾಣ ಮಂಟಪದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.