ಸೋಮವಾರ, ಡಿಸೆಂಬರ್ 6, 2021
27 °C

ಏತ ನೀರಾವರಿ ಕೆಲಸ ತ್ವರಿತಗೊಳಿಸಿ: ಶರಣು ಸಲಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ತಾಲ್ಲೂಕಿನ 16 ಕೆರೆಗಳನ್ನು ತುಂಬಿಸಲು ಮಾಂಜರಾ ನದಿಯಿಂದ ಏತ ನೀರಾವರಿ ಮೂಲಕ ನೀರು ಸಾಗಿಸುವ ಯೋಜನೆಯ ಕಾಮಗಾರಿ ತ್ವರಿತಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶರಣು ಸಲಗರ ಅವರು ಬೆಂಗಳೂರಿನಲ್ಲಿ ಈಚೆಗೆ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಅವರಿಗೆ ಮನವಿಪತ್ರ ಸಲ್ಲಿಸಿದ್ದಾರೆ.

ನಗರದ ಐತಿಹಾಸಿಕ ತ್ರಿಪುರಾಂತ ಕೆರೆ, ಚುಳಕಿನಾಲಾ ಜಲಾಶಯ ಸೇರಿದಂತೆ ಅನೇಕ ಕೆರೆಗಳಲ್ಲಿ ಬೇಸಿಗೆಯಲ್ಲಿ ನೀರು ಇರಲ್ಲ. ಆದ್ದರಿಂದ ಈ ಯೋಜನೆ ಕಾರ್ಯಗತಗೊಳಿಸಲಾಗುತ್ತಿದ್ದು, ಕೊಂಗಳಿ ಹತ್ತಿರ ಇದಕ್ಕಾಗಿ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಆದ್ದರಿಂದ ಎಲ್ಲ ಕೆಲಸಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಖಂಡರಾದ ರತಿಕಾಂತ ಕೊಹಿನೂರ, ಶಿವಕುಮಾರ ಶೆಟಗಾರ್, ಬಸವರಾಜಸ್ವಾಮಿ ಬಟಗೇರಾ, ಸದಾನಂದ ಪಾಟೀಲ, ಶಿವಾ ಕಲ್ಲೋಜಿ, ಆನಂದ ಪಾಟೀಲ, ಸಂಜೀವ ಮೂಲಗೆ, ಬಸವರಾಜ ಮೂಲಗೆ ಹಾಗೂ ಹೇಮಂತ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.