ಭಾನುವಾರ, ಜುಲೈ 3, 2022
27 °C
ಬಿಜೆಪಿ ಪಕ್ಷದ ತಾಲ್ಲೂಕು ಕಾರ್ಯಕಾರಿಣಿ ಸಭೆಯಲ್ಲಿ ಡಿ.ಕೆ.ಸಿದ್ರಾಮ ಹೇಳಿಕೆ

ಸಶಕ್ತ ಸಮಾಜ, ಬಲಿಷ್ಠ ರಾಷ್ಟ್ರ ನಿರ್ಮಾಣ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಸಮಾಜದ ಸರ್ವ ಜನಾಂಗದ ಜನರಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸುವುದರ ಮೂಲಕ ಸಶಕ್ತ ಸಮಾಜ, ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವುದೇ ಭಾರತೀಯ ಜನತಾ ಪಕ್ಷದ ಗುರಿಯಾಗಿದೆ’ ಎಂದು ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಿ.ಕೆ.ಸಿದ್ರಾಮ ಹೇಳಿದರು.

ತಾಲ್ಲೂಕಿನ ಡೋಣಗಾಪೂರ ಗ್ರಾಮದ ಡೋಣೇಶ್ವರ ಮಂದಿರದಲ್ಲಿ ಭಾನುವಾರ ನಡೆದ ಬಿಜೆಪಿ ಪಕ್ಷದ ತಾಲ್ಲೂಕು ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಎಲ್ಲ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು. ಪಕ್ಷದ, ಸರ್ಕಾರದ ಉದಾತ್ತ ಚಿಂತನೆ, ಕಾರ್ಯಗಳನ್ನು ಪ್ರತಿಯೊಬ್ಬರ ಮನೆ, ಮನಕ್ಕೆ ಮುಟ್ಟಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ,‘ನಮ್ಮದು ಕಾರ್ಯಕರ್ತರ ಪಕ್ಷ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಪಕ್ಷವನ್ನು ಎಲ್ಲ ಹಂತಗಳಲ್ಲೂ ಬಲಗೊಳಿಸಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಮಾತನಾಡಿ,‘ನಮ್ಮದು ಶಿಸ್ತು, ಬದ್ಧತೆಯ ಪಕ್ಷವಾಗಿದ್ದು, ಎಲ್ಲರೂ ಪಕ್ಷದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸಿ ಪಕ್ಷದ ಘನತೆಯನ್ನು ಇನ್ನಷ್ಟು ಹೆಚ್ಚಿಸಬೇಕು’ ಎಂದು ತಿಳಿಸಿದರು.

ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸೂರ್ಯಕಾಂತ ಡೋಣಿ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಪಂಡಿತ ಶಿರೋಳೆ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಶಿವರಾಜ ಗಂದಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಬಾಬುರಾವ್ ಕಾರಬಾರಿ, ಸುರೇಶ ಬಿರಾದಾರ, ಡಿಗಂಬರ ಮಾನಕಾರಿ, ಸೂರಜಸಿಂಗ್ ರಜಪೂತ, ಶಾಂತವೀರ ಕೇಸ್ಕರ, ಸುರೇಶ್ ಹುಬಳ್ಳಿಕರ್, ಪ್ರತಾಪ ಪಾಟೀಲ, ಗೋವಿಂದ ಬಿರಾದರ, ವೀರಣ್ಣ ಕಾರಬಾರಿ, ರವಿ ಕಣಜೆ ಹಾಗೂ ಸುರೇಶ್ ಕಾನೇಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು