ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ; ಭಗವಂತ ಖೂಬಾ

Last Updated 29 ನವೆಂಬರ್ 2021, 6:17 IST
ಅಕ್ಷರ ಗಾತ್ರ

ಹುಮನಾಬಾದ್: ‘ಪಕ್ಷವು ಪ್ರಕಾಶ ಖಂಡ್ರೆ ಅವರನ್ನು ಅಭ್ಯರ್ಥಿಯಾಗಿ ನಿಲ್ಲಿ ಸಿದೆ. ಅವರ ಗೆಲುವಿಗೆ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರು ಶ್ರಮಿಸಬೇಕು’ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಆಯೋಜಿಸಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

’ನಮ್ಮ ಅಭ್ಯರ್ಥಿ ಪರ ಪ್ರಚಾರ ಕೈಗೊಂಡು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ತಿಳಿಸಿ ಮತಯಾಚಿಸಬೇಕು’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮಾತನಾಡಿ, ’ಕಾರ್ಯ ಕರ್ತರು ಅಭ್ಯರ್ಥಿಯ ಗೆಲುವಿಗೆ ಶ್ರಮಿ ಸುತ್ತಿರುವುದರಿಂದ, ನಮ್ಮ ಪಕ್ಷದ ಗೆಲುವು ಖಚಿತವಾಗಿದೆ‘ ಎಂದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನ್, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಬಿಎಸ್‌ಎಸ್‌ಕೆ ಅಧ್ಯಕ್ಷ ಸುಭಾಷ ಕಲ್ಲೂರ, ಈಶ್ವರ ಸಿಂಗ್ ಠಾಕೂರ್, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ನಗರಾಭಿವೃದ್ಧಿ ಅಧ್ಯಕ್ಷ ಬಾಬು ವಾಲಿ, ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಡಿ.ಕೆ ಸಿದ್ರಾಮ ಇದ್ದರು.

ಬೆಲ್ದಾಳೆ ಪ್ರಚಾರ

ಬೀದರ್: ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಜಿಲ್ಲೆಯ ವಿವಿಧೆಡೆ ಪ್ರಚಾರ ನಡೆಸಿದರು.

ಮನ್ನಳ್ಳಿ, ಬರೂರ, ನಾಗೂರ, ಹೊಕ್ರಾಣ, ಸಿಂದೋಲ್, ಬೇಮಳಖೇಡ, ಉಡಮನಳ್ಳಿ, ಚಾಂಗಲೇರಾ, ಮೀನಕೇರಾ ಮೊದಲಾದ ಗ್ರಾಮಗಳಿಗೆ ಭೇಟಿ ಕೊಟ್ಟು ಮತಯಾಚನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಗ್ರಾಮ ಪಂಚಾಯಿತಿಗಳಿಗೆ ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಿದೆ. ಸ್ವಚ್ಛ ಭಾರತ ಅಭಿಯಾನದಡಿ ಹಳ್ಳಿ ಹಳ್ಳಿಗಳಲ್ಲೂ ವೈಯಕ್ತಿಕ ಶೌಚಾಲಯ ನಿರ್ಮಿಸಿದೆ. ಪರಿಷತ್ ಚುನಾವಣೆಯಲ್ಲಿ ಮತದಾ ರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕೋರಿದರು.

ಚುನಾವಣೆ ಉಸ್ತುವಾರಿ ಶಿವರಾಜ ಗಂದಗೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಹೊಕ್ರಾಣೆ, ಕಿರಣ ಪಾಟೀಲ, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಬೀದರ್ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಚನ್ನಪ್ಪ ಗೌರಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT