ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಪ್ರತಿಭಟನೆ ಬಿರುಸಿನ ಮಳೆಯಿಂದಾಗಿ ಸಾಧ್ಯವಾಗಲಿಲ್ಲ.

ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿ ನಿರ್ಗಮಿಸಿದರು.

ಮಧ್ಯಾಹ್ನ ನ್ಯಾಯಾಲಯವು ಸಿದ್ದರಾಮಯ್ಯನವರ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಜಿಲ್ಲಾ ಬಿಜೆಪಿ ಪ್ರತಿಭಟನೆಗೆ ಸಂಜೆ ಕರೆ ಕೊಟ್ಟಿತ್ತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಸೇರಿದಂತೆ ಕೆಲ ಮುಖಂಡರು ಕಾರಿನಲ್ಲಿ ಜಿಲ್ಲಾಧಿಕಾರಿ ಸಮೀಪದ ಪ್ರವಾಸಿ ಮಂದಿರಕ್ಕೆ ಬಂದರು. ಇದೇ ವೇಳೆ ಬಿರುಸಿನ ಮಳೆ ಶುರುವಾಯಿತು. ಮಳೆ ನಿಲ್ಲದಿರುವುದನ್ನು ಕಂಡು ಮಳೆಯಲ್ಲೇ ಕೆಲ ಮುಖಂಡರು ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಮನವಿ ಸಲ್ಲಿಸಿದರು. ಮಳೆಯ ಕಾರಣಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ಪ್ರತಿಭಟನೆಗೆ ಬರಬೇಕಿದ್ದ ಮುಖಂಡರು, ಕಾರ್ಯಕರ್ತರು ನಗರಕ್ಕೆ ಬರಲು ಸಾಧ್ಯವಾಗಲಿಲ್ಲ.

‘ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಾಗ ಕಾಂಗ್ರೆಸ್ನವರು ವಿರೋಧಿಸಿದ್ದರು. ಈಗ ಸ್ವತಃ ನ್ಯಾಯಾಲಯ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಈಗಲಾದರೂ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದರೆ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ನಗರ ಮಂಡಲ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಸಂಜೀವಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.