ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯಿಂದ ಆರು ಲಕ್ಷ ಸದಸ್ಯತ್ವದ ಗುರಿ: ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ

Published : 26 ಆಗಸ್ಟ್ 2024, 15:53 IST
Last Updated : 26 ಆಗಸ್ಟ್ 2024, 15:53 IST
ಫಾಲೋ ಮಾಡಿ
Comments

ಬೀದರ್‌: ‘ಬರುವ ಸೆಪ್ಟೆಂಬರ್‌, ಅಕ್ಟೋಬರ್‌ನಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ ಆರು ಲಕ್ಷ ಸದಸ್ಯತ್ವದ ಗುರಿ ಹಾಕಿಕೊಳ್ಳಲಾಗಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸೆಪ್ಟೆಂಬರ್‌ 1ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸದಸ್ಯತ್ವ ಅಭಿಯಾನ ಉದ್ಘಾಟಿಸುವರು. ಅದೇ ದಿನ ಜಿಲ್ಲೆಯಲ್ಲಿ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕರೂ ಆದ ಬಿಜೆಪಿ ಜಿಲ್ಲಾ ಪ್ರಭಾರಿ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಚಾಲನೆ ನೀಡುವರು ಎಂದು ತಿಳಿಸಿದರು.

ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೊಕೇಶ ಅಂಬೆಕಲ್ಲು ಮಾತನಾಡಿ,‘ಬೀದರ್‌ ಜಿಲ್ಲೆಯಿಂದ ರಾಜ್ಯದಲ್ಲಿ ಅತಿ ಹೆಚ್ಚು ಸದಸ್ಯತ್ವ ಮಾಡಬೇಕು. ಪ್ರತಿಯೊಬ್ಬರ ಮನೆ ಮನೆಗೆ ಹೋಗಿ ಕೆಳಮಟ್ಟದಲ್ಲಿ ಸದಸ್ಯತ್ವ ಮಾಡಬೇಕು. ಈ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕೃಷ್ಣನ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು. 

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಭಾಪತಿ ರಘುನಾಥರಾವ್‌ ಮಲ್ಕಾಪೂರೆ, ವಿಧಾನ ಪರಿಷತ್‌ ಸದಸ್ಯ ಎಂ.ಜಿ.ಮುಳೆ, ರಾಷ್ಟ್ರೀಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಜೈಕುಮಾರ ಕಾಂಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಉಲ್ಲಾಸಿನಿ ಮುದಾಳೆ, ನಗರ ಮಂಡಲ ಅಧ್ಯಕ್ಷ ಶಶಿ ಹೊಸಳ್ಳಿ, ಮುಖಂಡರಾದ ರಾಜಶೇಖರ ನಾಗಮೂರ್ತಿ, ಮಾಧವ ಹಾಸುರೆ, ಶಿವಾನಂದ ಮಂಠಾಳಕರ್‌, ಈಶ್ವರ ಸಿಂಗ್‌ ಠಾಕೂರ್‌, ದೀಪಕ್‌ ಗಾದಗೆ, ವಿಜಯಕುಮಾರ ಪಾಟೀಲ ಗಾದಗಿ, ಸುಭಾಷ ಮಡಿವಾಳ, ರಾಜಕುಮಾರ ಪಾಟೀಲ ನೇಮತಾಬಾದ್‌, ಜಿಲ್ಲಾ ವಕ್ತಾರ ಸುಧೀರ ಕಾಡಾದಿ ಹಾಗೂ ಮಾಧ್ಯಮ ಸಂಚಾಲಕ ಶ್ರೀನಿವಾಸ ಚೌಧರಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT