ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೂತ್ ಮಟ್ಟದಿಂದ ಪಕ್ಷ ಬಲಪಡಿಸಿ: ಭಗವಂತ ಖೂಬಾ

Last Updated 3 ಮೇ 2022, 4:53 IST
ಅಕ್ಷರ ಗಾತ್ರ

ಭಾಲ್ಕಿ: ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು, ಈಗಿನಿಂದಲೇ ಕಾರ್ಯಕರ್ತರು ಬಿಜೆಪಿಯನ್ನು ಬೂತ್ ಮಟ್ಟದಿಂದ ಬಲ ಪಡಿಸಲು ಶ್ರಮಿಸಬೇಕು ಎಂದು ಕೇಂದ್ರದ ಸಚಿವ ಭಗವಂತ ಖೂಬಾ ಹೇಳಿದರು.

ಇಲ್ಲಿನ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಆಯೋಜಿ ಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ವಾಗಿ ನೆಲಕಚ್ಚಿದೆ. ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿ ಕೊಂಡಿದೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮಾತನಾಡಿ, ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಇದು ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಪಕ್ಷ ನಿಷ್ಠರಿಗೆ ಸದಾ ಗೌರವ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಯೋಜನೆಗಳು ನೀಡಿದ ಹೆಗ್ಗಳಿಕೆ ಅವರದ್ದು ಎಂದರು.

ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಸಿ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪೂರೆ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಶಾಸಕ ಶರಣು ಸಲಗರ್, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಡಾ.ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಮಾರುತಿರಾವ್ ಮೂಳೆ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ್, ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ, ಸೂರ್ಯಕಾಂತ ನಾಗಮಾರಪಳ್ಳಿ, ಈಶ್ವರಸಿಂಗ್ ಠಾಕೂರ, ಶಿವರಾಜ ಗಂದಗೆ, ವಿಜಯಕುಮಾರ ಡಾಂಗೆ, ಸೋಮನಾಥ ಪಾಟೀಲ, ದೀಪಕ ಗಾಯಕ ವಾಡ್, ವಿದ್ಯಾಸಾಗರ ಶಾಪೂರೆ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಂಡಿತ ಶಿರೋಳೆ, ಸಂಗಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT