ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತೆಯರಿಂದ ಬೈಕ್‌ ರ್‍ಯಾಲಿ

Published 6 ಮಾರ್ಚ್ 2024, 8:48 IST
Last Updated 6 ಮಾರ್ಚ್ 2024, 8:48 IST
ಅಕ್ಷರ ಗಾತ್ರ

ಬೀದರ್‌: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ನಗರದಲ್ಲಿ ಬೈಕ್‌ ರ್‍ಯಾಲಿ ನಡೆಸಿದರು.

‘ಫಿರ್ ಏಕ್ ಬಾರ್ ಮೋದಿ ಸರ್ಕಾರ್‌’ ಎಂಬ ಘೋಷವಾಕ್ಯದಡಿ ಕಾರ್ಯಕರ್ತೆಯರು ಬೈಕಿಗೆ ಬಿಜೆಪಿ ಧ್ವಜ ಕಟ್ಟಿಕೊಂಡು, ಘೋಷಣೆ ಕೂಗುತ್ತ ನಗರದ ಪ್ರಮುಖ ಮಾರ್ಗಗಳಲ್ಲಿ ರ್‍ಯಾಲಿ ನಡೆಸಿದರು.

ಪಕ್ಷದ ಮಹಿಳಾ ಮೋರ್ಚಾ ಅಧ್ಯಕ್ಷೆ ಲುಂಬಿನಿ ಗೌತಮ್ ಮಾತನಾಡಿ,‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ರಾಜಕೀಯ ಹಾಗೂ ಇತರ ಕ್ಷೇತ್ರಗಳಲ್ಲಿ ಮೀಸಲಾತಿ ಕಲ್ಪಿಸುವುದಕ್ಕೆ ವಿಧೇಯಕ ತರಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಹೊಸ ಕಾನೂನು ಜಾರಿ ಮಾಡಲಾಗಿದೆ. ಮಹಿಳೆಯರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ’ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕಿ ಶಕುಂತಲಾ ಬೆಲ್ದಾಳೆ, ಬಿಜೆಪಿ ಉಪಾಧ್ಯಕ್ಷೆ ಪ್ರಸನ್ನ ಲಕ್ಷ್ಮಿ ದೇಶಪಾಂಡೆ, ಸಂಗೀತಾ ಅಡಕೆ, ಹೇಮ ತುಕ್ಕಾರೆಡ್ಡಿ, ಮಹಾನಂದ ಪಾಟೀಲ, ಶಶಿಕಲಾ, ಸರಸ್ವತಿ ನವೀನ, ಸಹನಾ ಪಾಟೀಲ, ಜಯಾ ಮಹಾದೇವ, ಶ್ರೇಯಾ, ಸುಜಾತಾ ಹೊಸಮನಿ ಹಾಗೂ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT