ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನಾ ರ್‍ಯಾಲಿ

Published 3 ಜನವರಿ 2024, 11:03 IST
Last Updated 3 ಜನವರಿ 2024, 11:03 IST
ಅಕ್ಷರ ಗಾತ್ರ

ಬೀದರ್‌: ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ರ್‍ಯಾಲಿಯುದ್ದಕ್ಕೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ, ಧಿಕ್ಕಾರ ಎಂದು ಘೋಷಣೆಗಳನ್ನು ಹಾಕಿದರು.

ಅನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ‘ಇಡೀ ದೇಶ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿದೆ. ಇಂತಹ ಹೊತ್ತಿನಲ್ಲಿ ರಾಜ್ಯ ಸರ್ಕಾರವು ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದೆ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ ಪೂಜಾರಿ ಹಾಗೂ ಇತರೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದೆ. ಇಂದು ತೀವ್ರ ಖಂಡನಾರ್ಹ ಎಂದು ಮುಖಂಡರು ಆಕ್ರೋಶ ಹೊರಹಾಕಿದರು.

ಬಂಧನ ವಿರೋಧಿಸಿ ರಾಜ್ಯ ಬಿಜೆಪಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಿರುವುದರಿಂದ ಈ ರ್‍ಯಾಲಿ ನಡೆಸಲಾಗಿದೆ. ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿಯೂ ಆದ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಾನಂದ ಮಂಠಾಳಕರ, ಕಲಬುರಗಿ ಸಹ ಪ್ರಭಾರಿ ಈಶ್ವರ ಸಿಂಗ್‌ ಠಾಕೂರ, ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಮಹೇಶ್ವರ ಸ್ವಾಮಿ, ಬಾಬುವಾಲಿ ಮೊದಲಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT