ಶುಕ್ರವಾರ, ಫೆಬ್ರವರಿ 3, 2023
18 °C

ಗುಜರಾತ್‍ನಲ್ಲಿ ಬಿಜೆಪಿ ಗೆಲುವು: ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ ಪ್ರಯುಕ್ತ ಪಕ್ಷದ ನಗರ ಮಂಡಲ ಕಾರ್ಯಕರ್ತರು ನಗರದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.

ನಗರದ ಶಿವನಗರದಲ್ಲಿ ಇರುವ ಪಕ್ಷದ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಮುಖಂಡ ಎನ್.ಆರ್. ವರ್ಮಾ, ನಗರ ಮಂಡಲ ಅಧ್ಯಕ್ಷ ಶಶಿದರ ಹೊಸಳ್ಳಿ, ರಾಜಕುಮಾರ ಚಿದ್ರಿ, ಮಹೇಶ್ವರ ಸ್ವಾಮಿ, ಸುಭಾಷ್ ಮಡಿವಾಳ, ರೋಶನ್ ವರ್ಮಾ, ಗಣೇಶ, ನರೇಶ ಗೌಳಿ, ಸುನೀಲ್ ಗೌಳಿ, ನಿತಿನ್ ನವಲಕಿಲೆ, ಸಂಜಯ್ ಜೀರ್ಗಾ, ಪ್ರಸನ್ನಲಕ್ಷ್ಮಿ ದೇಶಪಾಂಡೆ, ಸರಸ್ವತಿ ಪಾಟೀಲ, ಸಂಗಮೇಶ ನಾಸಿಗಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು