ಶನಿವಾರ, ಆಗಸ್ಟ್ 13, 2022
26 °C

ಗುರು-ಶಿಷ್ಯರ ಸಂಬಂಧ ಪವಿತ್ರ: ನಾಗಶೆಟ್ಟೆಪ್ಪ ಬಿರಾದಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ಸಂಬಂಧ ಅತ್ಯಂತ ಪವಿತ್ರವಾದದ್ದು, ಅದನ್ನು ಮೌಲ್ಯಯುತವಾಗಿ ಮುಂದುವರಿಸಿಕೊಂಡು ಹೋಗುವ ಗುರುತರ ಜವಾಬ್ದಾರಿ ವಿದ್ಯಾರ್ಥಿ–ಶಿಕ್ಷಕರ ಮೇಲಿದೆ’ ಎಂದು ಪ್ರಾಚಾರ್ಯ ನಾಗಶೆಟ್ಟೆಪ್ಪ ಬಿರಾದಾರ ಹೇಳಿದರು.

ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಪದವಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅವಿರತವಾಗಿ ಶ್ರಮಿಸಿ ಜೀವನದಲ್ಲಿ ಮಹತ್ತರ ಸಾಧನೆಗೈಯಬೇಕು ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಈಶ್ವರ ಖಂಡ್ರೆಯವರ ಅವಿರತ ಪರಿಶ್ರಮದಿಂದ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಗಣಿತ ವಿಭಾಗದ ಮುಖ್ಯಸ್ಥ ಡಾ.ಅಶೋಕ ಕೋಟಿ, ಡಾ.ರಾಜಶೇಖರ ಮಠಪತಿ, ಡಾ.ಬಸವರಾಜ ಕವಡಿ, ಸಂಗಶೆಟ್ಟಿ ಕಲ್ಯಾಣೆ, ಮಲ್ಲಿಕಾರ್ಜುನ ಹೊನ್ನಾ ಹಾಗೂ ಡಾ. ಬಿ.ಸೂರ್ಯಕಾಂತ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.