ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಯುವಕನ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Published 20 ಏಪ್ರಿಲ್ 2024, 19:57 IST
Last Updated 20 ಏಪ್ರಿಲ್ 2024, 19:57 IST
ಅಕ್ಷರ ಗಾತ್ರ

ಬೀದರ್: ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಹೇಳಿ ಬ್ಲ್ಯಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ

ಲಾಯಕ್ ಅಲಿ ಇಸ್ಮಾಯಿಲ್‌ ಅಲಿ‌ ಲದಾಫ್ (20) ಬಂಧಿತ ಯುವಕ.

ಬಾಲಕಿಯ ಬೆತ್ತಲೆ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಹೆದರಿಸಿ ಬಾಲಕಿಯ ಮೇಲೆ ಹಲವು ಸಲ ಲಾಯಕ್ ಅಲಿ ಅತ್ಯಾಚಾರ ಎಸಗಿದ್ದಾನೆ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಪುನಃ ಕರೆದೊಯ್ದು ಅತ್ಯಾಚಾರಕ್ಕೆ ‌ಯತ್ನಿಸುವಾಗ ಸ್ಥಳೀಯರು ಅನುಮಾನಗೊಂಡು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಚನ್ನಬಸವಣ್ಣ ಎಸ್.ಎಲ್. ಪ್ರಜಾವಾಣಿಗೆ ತಿಳಿಸಿದ್ದಾರೆ.

ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT