ನಂತರ ಮಾತನಾಡಿದ ಅವರು, ತಾಲ್ಲೂಕಿನ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ಅಗತ್ಯ, ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇವುಗಳಿಂದ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬಡ ರೋಗಿಗಳಿಗೆ ತ್ವರಿತ ಮತ್ತು ಸಮರ್ಪಕ ಆರೋಗ್ಯಸೇವೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.