ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜೀವ ಉಳಿಸಲು ರಕ್ತದಾನ ಮಾಡಿ

ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಿವಿಮಾತು
Last Updated 30 ಜೂನ್ 2022, 2:00 IST
ಅಕ್ಷರ ಗಾತ್ರ

ಬೀದರ್: ‘ಯುವಕರು ಜೀವ ಉಳಿಸಲು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಕಿವಿಮಾತು ಹೇಳಿದರು.

ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನ ಎಲ್ಲ ದಾನಗಳಲ್ಲೇ ಶ್ರೇಷ್ಠವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಐಸಿಟಿಸಿ ಮೇಲ್ವಿಚಾರಕ ಸೂರ್ಯಕಾಂತ ಎಸ್. ಮಾತನಾಡಿ,‘ಜಿಲ್ಲೆಯಲ್ಲಿ ಐದು ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. 2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 1,053 ಯೂನಿಟ್ ರಕ್ತ ಸಂಗ್ರಹವಾಗಿದೆ’ ಎಂದು ಹೇಳಿದರು.

ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಶಾಮಸುಂದರ ಪಾಟೀಲ (60 ಸಲ), ಸಂಗಮೇಶ (19 ಸಲ) ಹಾಗೂ ರೂಪಾರಾಣಿ (5 ಸಲ) ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಶರಣಯ್ಯ ಸ್ವಾಮಿ, ರಕ್ತನಿಧಿ ಕೇಂದ್ರದ ಡಾ. ವೀರೇಂದ್ರ ಪಾಟೀಲ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶಂಕರ.ಬಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಸಂಜೀವಕುಮಾರ ಪಾಟೀಲ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಕಿರಣ ಪಾಟೀಲ ಹಾಗೂ ಬೀದರ್ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ ಇದ್ದರು.

ಪ್ರಯೋಗ ಶಾಲಾ ತಂತ್ರಜ್ಞ ಅರವಿಂದ ನಿರೂಪಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತನಿಧಿ ಕೇಂದ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT