ಬುಧವಾರ, ಆಗಸ್ಟ್ 10, 2022
21 °C

ರಾಹುಲ್‌ ಗಾಂಧಿ ಜನ್ಮದಿನಾಚರಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ರಕ್ತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ರಾಹುಲ್‌ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನ ಆವರಣದಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ರಕ್ತದಾನ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೋವಿಡ್‌ ಸೋಂಕಿತರು, ರೋಗಿಗಳಿಗೆ ಹಣ್ಣು ಹಂಪಲ, ಮಾಸ್ಕ್‌ ವಿತರಿಸಲಾಯಿತು.

ಶಾಸಕರಾದ ರಾಜಶೇಖರ್ ಪಾಟೀಲ, ರಹೀಂ ಖಾನ್, ವಿಧಾನ ಪರಿಷತ್‌ ಅರವಿಂದಕುಮಾರ ಅರಳಿ, ಮಾಜಿ ಸಂಸದ ನರಸಿಂಗ್‌ ಸೂರ್ಯವಂಶಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಿಲ್ಲಾ ಎಸ್‌.ಸಿ ಎಸ್.ಸಿ ಘಟಕದ ಅಧ್ಯಕ್ಷ ಡಿ.ಕೆ.ಸಂಜುಕುಮಾರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ವನಿಲಾ, ಯುವ ಕಾಂಗ್ರೆಸ್‌ ಅದ್ಯಕ್ಷ ಬರೀದ್‌, ಆನಂದ ದೇವಪ್ಪ, ಇರ್ಷಾದ್ ಪೈಲ್ವಾನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು