ಸೋಮವಾರ, ಸೆಪ್ಟೆಂಬರ್ 27, 2021
27 °C

20 ಜನರಿಂದ ರಕ್ತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್, ಬ್ರಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಚಿತ್ರನಟ ಸುದೀಪ್ ಜನ್ಮದಿನದ ಪ್ರಯುಕ್ತ ಇಲ್ಲಿಯ ಐಎಂಎ ಹಾಲ್‍ನಲ್ಲಿ ನಡೆದ ಶಿಬಿರದಲ್ಲಿ 20 ಜನ ರಕ್ತದಾನ ಮಾಡಿದರು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ಅಧ್ಯಕ್ಷ ಎಸ್.ಬಿ. ಚಿಟ್ಟಾ ಅವರು, ರಕ್ತದಾನ ಎಲ್ಲ ದಾನಗಳಲ್ಲೇ ಶ್ರೇಷ್ಠವಾಗಿದೆ. ರಕ್ತದಾನದಿಂದ ಜೀವ ಉಳಿಸಬಹುದು. ಕಾರಣ, ಯುವಕರು ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಬ್ರಿಮ್ಸ್ ರಕ್ತನಿಧಿ ಕೇಂದ್ರದ ಡಾ. ವೀರೇಂದ್ರ ಪಾಟೀಲ ಮಾತನಾಡಿದರು. ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಕಾರ್ಯದರ್ಶಿ ಸುಧೀಂದ್ರ ಸಿಂದೋಲ್, ರೋಟರಿ ಕ್ಲಬ್ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಇನ್ನರ್ ವ್ಹಿಲ್ ಕ್ಲಬ್ ಅಧ್ಯಕ್ಷೆ ಸುನೈನಾ ಗುತ್ತಿ, ಡಾ.ಸುಭಾಷ ಬಶೆಟ್ಟಿ, ಜಹೀರ್ ಅನ್ವರ್, ಶೇಖರ ರಾಗಾ, ಭರತ ಪಾಟೀಲ, ಕಾಶಿನಾಥ ಪಾಟೀಲ, ಗುಂಡಪ್ಪ ಘೋದೆ, ಸೂರ್ಯಕಾಂತ ರಾಮಶೆಟ್ಟಿ, ಅನಿತಾ ಚಿಂತಾಮಣಿ ಇದ್ದರು.

ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಿವಕುಮಾರ ಯಲಾಲ್ ಸ್ವಾಗತಿಸಿದರು. ಸತ್ಯಪ್ರಕಾಶ ಹಳ್ಳಿಖೇಡಕರ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.