ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

48 ವಿದ್ಯಾರ್ಥಿಗಳಿಂದ ರಕ್ತದಾನ

Last Updated 19 ಜನವರಿ 2022, 14:53 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಬಿ.ವಿ. ಭೂಮರಡ್ಡಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಹಮ್ಮಿಕೊಂಡಿದ್ದ ಶಿಬಿರದಲ್ಲಿ 48 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಶಿಬಿರ ಉದ್ಘಾಟಿಸಿದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಮಾತನಾಡಿ, ರಕ್ತದಾನ ಶ್ರೇಷ್ಠ ಕಾರ್ಯವಾಗಿದೆ ಎಂದು ಹೇಳಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ರಕ್ತದಾನದಿಂದ ಮಾತ್ರ ರೋಗಿಗಳ ಜೀವ ಉಳಿಸಲು ಸಾಧ್ಯವಿದೆ ಎಂದು ನುಡಿದರು.

ಪ್ರಾಚಾರ್ಯ ಡಾ. ವಿ.ಎಂ. ಚನಶೆಟ್ಟಿ, ಎನ್‍ಸಿಸಿ ಜಿಲ್ಲಾ ನೋಡಲ್ ಅಧಿಕಾರಿ ಮೇಜರ್ ಡಾ. ಪಿ. ವಿಠ್ಠಲ ರೆಡ್ಡಿ, ಎನ್‍ಎಸ್‍ಎಸ್ ಅಧಿಕಾರಿ ಡಾ. ದೀಪಾ ರಾಗಾ, ಡಾ. ಮಲ್ಲಿಕಾರ್ಜುನ ಕೋಟೆ, ಪ್ರೊ. ಶಿವರಾಜ ಜಿ. ಮಠ, ಪ್ರೊ. ಅನಿಲಕುಮಾರ ಆಣದೂರೆ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಇದ್ದರು.

ಡಾ. ಸಂತೋಷಕುಮಾರ ಹಂಗರಗಿ ಸ್ವಾಗತಿಸಿದರು. ಡಾ. ಹಣಮಂತಪ್ಪ ಬಿ. ಸೇಡಂಕರ್ ನಿರೂಪಿಸಿದರು. ಮಹಾನಂದ ಮಡಕಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT