ಬೀದರ್: ಜಿಲ್ಲೆಯ ಹುಲಸೂರ ತಾಲ್ಲೂಕಿನ ಗಡಿರಾಯಪಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಬಳಿಯಿದ್ದ ನೀಲಿ ಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕೃತ್ಯ ಎಸಗಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆಶ್ವಾಸನೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ಭಾರತೀಯ ದಲಿತ ಪ್ಯಾಂಥರ್, ದಲಿತ ಸಂಘರ್ಷ ಸಮಿತಿ, ದಲಿತ ಸೇನಾ, ಗ್ರಾಮ ಕ್ರಾಂತಿ ಸೇನೆ , ಭೀಮ್ ಆರ್ಮಿ ಸೇರಿದಂತೆ ಇತರೆ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.