ಬೀದರ್: ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರುವುದು ಕರ್ನಾಟಕದಲ್ಲಿ ಬರುವ ದಿನಗಳಲ್ಲಿ ನಡೆಯಲಿರುವ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆದ ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ ತಿಳಿಸಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ ಭರ್ಜರಿ ಜಯ ಗಳಿಸಿತ್ತು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರ ಮಾಡುತ್ತಿರುವ ಜನಕಲ್ಯಾಣ ಕಾರ್ಯಕ್ರಮಕ್ಕೆ ಮತದಾರರು ಮನ್ನಣೆ ನೀಡಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರಿ ಗೆಲುವು ತಂದು ಕೊಟ್ಟಿದ್ದಾರೆ. ಬಿಜೆಪಿ ಮೇಲೆ ಜನರು ಇಟ್ಟಿರುವ ವಿಶ್ವಾಸಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಬರುವ ಏಪ್ರಿಲ್, ಮೇ ತಿಂಗಳಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಮಹಾರಾಷ್ಟ್ರ ಮಾದರಿಯಲ್ಲಿಯೇ ಇಲ್ಲಿ ಸಹ ಬಿಜೆಪಿ ಭರ್ಜರಿ ಜಯ ಗಳಿಸಿ ಕಾಂಗ್ರೆಸ್ ಗೆ ಮಣ್ಣು ಮುಕ್ಕಿಸುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.