ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋರಾಳ: ಕುಡಿಯುವ ನೀರಗಾಗಿ ಜನರ ಪರದಾಟ

Published 17 ಫೆಬ್ರುವರಿ 2024, 16:24 IST
Last Updated 17 ಫೆಬ್ರುವರಿ 2024, 16:24 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ಎಕಲಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೋರಾಳ ಗ್ರಾಮದ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.

ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ನಡೆಯುತ್ತಿದ್ದು, ಸದ್ಯದ ನೀರು ಪೂರೈಸುವ ಪೈಪ್ ಒಡೆದು ಹೋಗಿದೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನ ವಾಸಿಸುವ ಗಲ್ಲಿ ಸೇರಿದಂತೆ ಗ್ರಾಮದ ಅರ್ಧಕ್ಕೂ ಹೆಚ್ಚು ಪ್ರದೇಶದ ಜನರಿಗೆ ಕಳೆದ ಮೂರು ದಿನಗಳಿಂದ ನೀರು ಸಿಗುತ್ತಿಲ್ಲ.

ಸಮಸ್ಯೆ ಪರಿಹರಿಸಿ ಎಂದು ನಾನು ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗೆ ಸಾಕಷ್ಟು ಸಲ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ ಗಲ್ಲಿಗೆ ಖುದ್ದು ನಾನೇ ಒಂದು ಟ್ಯಾಂಕರ್ ನೀರು ತಂದು ಜನರಿಗೆ ಪೂರೈಸಿದ್ದೇನೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಾದೇವ ಮಚ್ಕೂರಿ ತಿಳಿಸಿದ್ದಾರೆ.

‘ನಮ್ಮ ಊರಲ್ಲಿ ಮೂರು ಸಾವಿರಕ್ಕೂ ಜಾಸ್ತಿ ಜನಸಂಖ್ಯೆ ಇದೆ. ನಾಲ್ಕು ಕೊಳವೆ ಬಾವಿ ಪೈಕಿ ಎರಡು ಮಾತ್ರ ಕೆಲಸ ಮಾಡುತ್ತಿವೆ. ಹೀಗಾಗಿ ನಮ್ಮ ಜನರಿಗೆ ಕುಡಿಯುವ ನೀರಿನ ಕೊರತೆಯಾಗಿದೆ. ಗ್ರಾಮದಲ್ಲಿ ನಡೆಯುತ್ತಿರುವ ಜೆಜೆಎಂ ಕಾಮಗಾರಿ ನಿಯಾಮಾನುಸಾರ ಆಗುತ್ತಿಲ್ಲ. ಕೇಳಲು ಹೋದರೆ ಬೆದರಿಕೆ ಉತ್ತರ ಬರುತ್ತಿದೆ’ ಎಂದು ದಲಿತ ಸೇನೆ ತಾಲ್ಲೂಕು ಅಧ್ಯಕ್ಷ ಉಮಾಕಾಂತ ಸೋನೆ ದೂರಿದ್ದಾರೆ.

ಜೆಜೆಎಂ ಕಾಮಗಾರಿ ನಡೆಯುತ್ತಿರುವುದರಿಂದ ಪೈಪ್ ಕಟ್ ಆಗಿ ನೀರು ಪೂರೈಕೆಗೆ ಸಮಸ್ಯೆಯಾಗಿರುವುದು ತಿಳಿದು ತಕ್ಷಣ ದುರಸ್ತಿ ಮಾಡಲು ಸಂಬಂಧಿತರಿಗೆ ಸೂಚಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸೀಂಗ್ ಠಾಕೂರ್ ತಿಳಿಸಿದ್ದಾರೆ.

Quote - ಬೋರಾಳದಲ್ಲಿ ನೀರಿನ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ. ಸಮಸ್ಯೆ ಪರಿಹರಿಸುವಂತೆ ಸಂಬಂಧಿತರಿಗೆ ಸೂಚಿಸಲಾಗಿದೆ. ಬೀರೇಂದ್ರಸಿಂಗ್ ಠಾಕೂರ್ ತಾಪಂ ಇಒ ಔರಾದ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT