ಪಟ್ಟಣದ ಸಂತೋಷ ಕಾಲೋನಿ ನಿವಾಸಿ ಜಿಶಾನ್ ಇಸ್ಮಾಯಿಲ್ (೧೧) ಮೃತಪಟ್ಟ ಬಾಲಕ. ಶಾಲೆ ಆವರಣದಲ್ಲಿ ಆಟ ಆಡಲು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಔರಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕ ಶವ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ.
ಕ್ರಮಕ್ಕೆ ಆಗ್ರಹ: ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನೂತನ ಕಾಲೇಜು ಕೊಠಡಿ ನಿರ್ಮಾಣ ಮಾಡುತ್ತಿರುವವರ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ. ಸಂಬಂಧಿತರ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿ ಬಂಧುತ್ವವ ವೇದಿಕೆ ಅಧ್ಯಕ್ಷ ರತ್ನದೀಪ ಕಸ್ತೂರೆ ಮತ್ತಿತರರು ಶನಿವಾರ ಇಲ್ಲಿಯ ಸರ್ಕಾರಿ ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ಹೊರ ಹಾಕಿದರು.