ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪಕ್ಷಗಳ ಕಚೇರಿಯಲ್ಲಿ ಬಾಬಾಸಾಹೇಬರಿಗೆ ನಮನ

Last Updated 14 ಏಪ್ರಿಲ್ 2022, 13:21 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ಕಚೇರಿಯಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು.

ಕಾಂಗ್ರೆಸ್ ಕಚೇರಿ:ನಗರದ ಶಿವನಗರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಾನ ಹಕ್ಕು ಹಾಗೂ ಅವಕಾಶಗಳನ್ನು ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮುಖಂಡರಾದ ಶಂಕರ ದೊಡ್ಡಿ, ಪ್ರದೀಪ್ ಕುಶನೂರ, ಸಂಜಯ ಜಾಗೀರದಾರ್, ಅಮೃತರಾವ್ ಚಿಮಕೋಡೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಿಲ್ಲಾ ಎಸ್.ಸಿ. ವಿಭಾಗದ ಅಧ್ಯಕ್ಷ ಸಂಜುಕುಮಾರ ಡಿ.ಕೆ, ಸುನೀಲ್ ಬಚ್ಚನ್, ಶರಣಪ್ಪ ಶರ್ಮಾ, ಜಾನ್ ವೆಸ್ಲಿ, ಸಚಿನ್ ಮಲ್ಕಾಪೂರೆ, ಗೋವರ್ಧನ್ ರಾಠೋಡ್, ಸನ್ಮುಕಪ್ಪ ಪಸರಗೆ, ನಗರಸಭೆ ಸದಸ್ಯರಾದ ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಶಶಿಧರ ಬಾಸನ್, ಮಲ್ಲಿಕಾರ್ಜುನ ಮೋಳಕೇರಿ, ಸತೀಶ್ ವಗ್ಗೆ, ರವೀಂದ್ರ, ವಿಜಯಕುಮಾರ ಮೋರ್ಗಿಕರ್ ಇದ್ದರು.

ಜೆಡಿಎಸ್ ಕಚೇರಿ:ನಗರದ ಮೋಹನ್ ಮಾರ್ಕೇಟ್ ಸಮೀಪದ ಜಾತ್ಯತೀತ ಜನತಾ ದಳದ ಜಿಲ್ಲಾ ಘಟಕದ ಕಚೇರಿಯಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರೂ ಆದ ಶಾಸಕ ಬಂಡೆಪ್ಪ ಕಾಶೆಂಪೂರ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪೂರ, ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಮುಖಂಡರಾದ ರಾಜಶೇಖರ ಜವಳೆ, ಬಸವರಾಜ ಪಾಟೀಲ ಹಾರೂರಗೇರಿ, ಅಸದೊದ್ದಿನ್, ದೇವೇಂದ್ರ ಸೋನಿ, ಅಶೋಕ ಪಾಟೀಲ, ಐಲಿನ್‍ಜಾನ್ ಮಠಪತಿ, ಸಂಗಮ್ಮ ಪಾಟೀಲ ಮೊದಲಾದವರು ಇದ್ದರು.

ಭಾರತೀಯ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ಕಚೇರಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ಹಾಗೂ ಬಹುಜನ ಸಮಾಜ ಪಾರ್ಟಿ ಕಚೇರಿಯಲ್ಲಿ ಸ್ವಾಮಿದಾಸ ಕೆಂಪೆನೋರ್‌ ಅವರು ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅನ್ನದಾನ ಮತ್ತು ಹಣ್ಣು ವಿತರಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT