ಓಣಿ ನಿವಾಸಿ ಸಮೀರ್ ಎನ್ನುವವರು ಭಾಗ್ಯಲಕ್ಷ್ಮಿ ಬಾಂಡ್ ಮಾಡಿಕೊಡಲು ಕೇಳಿಕೊಂಡಾಗ ಕಾರ್ಯಕರ್ತೆ ₹1,400 ಕೊಡಲು ಹೇಳಿದ್ದಾರೆ. ಅಲ್ಲದೆ ಕೈಯಿಂದ ಹಣ ಪಡೆದುಕೊಂಡಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ಈ ಬಗ್ಗೆ 24 ಗಂಟೆಗಳಲ್ಲಿ ಸ್ಪಷ್ಟೀಕರಣ ನೀಡಬೇಕು ಎಂದು ಸೂಚಿಸಿದ್ದಾರೆ.
ಇಲ್ಲದಿದ್ದರೆ ಬೇಜವಾಬ್ದಾರಿಯಿಂದ ವರ್ತಿಸಿದಕ್ಕಾಗಿ ಹಾಗೂ ಲಂಚ ಪಡೆದ ಕಾರಣಕ್ಕಾಗಿ ತಮ್ಮ ಮೇಲೆ ಶಿಸ್ತು ಕ್ರಮ ಜರುಗಿಸುವುದಕ್ಕಾಗಿ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ಶೀಘ್ರದಲ್ಲಿ ಉತ್ತರಿಸಬೇಕು ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.