ಗುರುವಾರ , ಜೂನ್ 17, 2021
23 °C

ಬೆಳಕುಣಿ ಸೇತುವೆ ಸಂಚಾರ ಸ್ಥಗಿತ: ಔರಾದ್ ತಾಲ್ಲೂಕಿನ ವಿವಿಧೆಡೆ ಭಾರಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ತಾಲ್ಲೂಕಿನ ವಿವಿಧೆಡೆ ಬುಧವಾರ ಭಾರಿ ಮಳೆಯಾಗಿ ಕೆಲ ಕಡೆ ಸಂಚಾರ ಸ್ಥಗಿತಗೊಂಡಿದೆ. ಸಂತಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ.

ಭಾಲ್ಕಿ-ಔರಾದ್ ರಸ್ತೆಯ ಬೆಳಕುಣಿ ಬಳಿ ಸೇತುವೆ ಮೇಲಿಂದ ನೀರು ಹರಿದು ಅರ್ಧ ಗಂಟೆ ಸಂಚಾರ ಸ್ಥಗಿತವಾಗಿದೆ. ಸಂತಪುರನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಸ್ಪತ್ರೆ ಆವರಣದಲ್ಲಿ ನೀರು ನುಗ್ಗಿ ರೋಗಿಗಳು ಪರದಾಡಬೇಕಾಯಿತು.

‘ಪಂಚಾಯಿತಿಯವರು ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ಬಂದಾಗ ಇಂತಹ ಸಮಸ್ಯೆ ಆಗುತ್ತಿದೆ’ ಎಂದು ಸಂತಪುರ ನಿವಾಸಿ ಮಂಜುನಾಥ ಸ್ವಾಮಿ ದೂರಿದರು.

ಕಳಪೆ ಕಾಮಗಾರಿ: ‘ಬೆಳಕುಣಿ ಗ್ರಾಮದ ಬಳಿ ಸೇತುವೆ ಕಾಮಗಾರಿ ಸರಿಯಾಗಿಲ್ಲ. ಒಂದೇ ಮಳೆಗೆ ಹಾಳಾಗಿದೆ. ಇದರಿಂದ ಇಲ್ಲಿ ಓಡಾಡುವ ಪ್ರಯಾಣಿಕರಲ್ಲಿ ಭೀತಿ ಆವರಿಸಿದೆ’ ಎಂದು ಬೆಳಕುಣಿ ನಿವಾಸಿ ಜಾವಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಧಾರಣ ಮಳೆ
ಬೀದರ್‌:
ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹುಮನಾಬಾದ್‌, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.